ADVERTISEMENT

ಚಿಂತಾಮಣಿ: ಇಂದು ಸಂವಿಧಾನ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2021, 2:06 IST
Last Updated 26 ನವೆಂಬರ್ 2021, 2:06 IST

ಚಿಂತಾಮಣಿ: ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜು, ಮೈಸೂರು ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಜಿಲ್ಲಾ ಕಾನೂನು ಸೇವಾಪ್ರಾಧಿಕಾರ, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿಯಿಂದ ನ. 26ರಂದು ಬೆಳಿಗ್ಗೆ 11ಗಂಟೆಗೆ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾರತದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾಲೇಜಿನ ಪ್ರಾಂಶುಪಾಲೆ ಡಾ.ಕೆ. ಶಾರದಾ ಅಧ್ಯಕ್ಷತೆವಹಿಸಲಿದ್ದಾರೆ. ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಉಪ ನಿರ್ದೇಶಕಿ ಡಾ.ಟಿ.ಸಿ. ಪೂರ್ಣಿಮಾ, ಹಿರಿಯ ಸಿವಿಲ್ ನ್ಯಾಯಾಧೀಶ ಲಕ್ಷ್ಮೀಕಾಂತ್ ಜೆ. ಮಿಸ್ಕಿನ್, ತಹಶೀಲ್ದಾರ್ ಹನುಮಂತರಾಯಪ್ಪ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಜಿ.ಆರ್. ಮಂಜುನಾಥ್, ಸಂಪನ್ಮೂಲ ವ್ಯಕ್ತಿ ಅಮೀರ್ ಪಾಷಾ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.