ADVERTISEMENT

ಬಾಗೇಪಲ್ಲಿ: ಪ್ರಜಾ ಸಂಘರ್ಷ ಸಮಿತಿಯ ಸಮಾವೇಶ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2021, 6:30 IST
Last Updated 29 ಡಿಸೆಂಬರ್ 2021, 6:30 IST
ಬಾಗೇಪಲ್ಲಿ ತಾಲ್ಲೂಕಿನ ಗೂಳೂರಿನಲ್ಲಿ ಪ್ರಜಾ ಸಂಘರ್ಷ ಸಮಿತಿಯಿಂದ ಹಮ್ಮಿಕೊಂಡಿದ್ದ ಸಂಘಟನಾ ಸಮಾವೇಶದಲ್ಲಿ ಮಾಜಿ ಶಾಸಕ.ಜಿ.ವಿ.ಶ್ರೀರಾಮರೆಡ್ಡಿ ಮಾತನಾಡಿದರು
ಬಾಗೇಪಲ್ಲಿ ತಾಲ್ಲೂಕಿನ ಗೂಳೂರಿನಲ್ಲಿ ಪ್ರಜಾ ಸಂಘರ್ಷ ಸಮಿತಿಯಿಂದ ಹಮ್ಮಿಕೊಂಡಿದ್ದ ಸಂಘಟನಾ ಸಮಾವೇಶದಲ್ಲಿ ಮಾಜಿ ಶಾಸಕ.ಜಿ.ವಿ.ಶ್ರೀರಾಮರೆಡ್ಡಿ ಮಾತನಾಡಿದರು   

ಬಾಗೇಪಲ್ಲಿ: ಕ್ಷೇತ್ರದ ಶಾಸಕರು ಸರ್ಕಾರದಿಂದ ಸಮರ್ಪಕವಾಗಿ ಅನುದಾನ ತರದೇ ಇರುವುದರಿಂದ, ಗ್ರಾಮದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಮಾಜಿ ಶಾಸಕ, ಪ್ರಜಾ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಜಿ.ವಿ.ಶ್ರೀರಾಮರೆಡ್ಡಿ ಆರೋಪಿಸಿದರು.

ತಾಲ್ಲೂಕಿನ ಗೂಳೂರು ಹೋಬಳಿಯ ಕೇಂದ್ರದಲ್ಲಿ ಪ್ರಜಾ ಸಂಘರ್ಷ ಸಮಿತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಗೂಳೂರು ಹೋಬಳಿಯ ಸಂಘಟನಾ ಸಮಾವೇಶದಲ್ಲಿ ಮಾತನಾಡಿದರು.

ತಾಲ್ಲೂಕಿನಲ್ಲಿ ಕಳೆದ 7 ವರ್ಷಗಳಿಂದ ಶಾಶ್ವತವಾದ ಕೆಲಸಗಳು ಆಗಿಲ್ಲ. ಅತಿವೃಷ್ಠಿ, ಅನಾವೃಷ್ಠಿ ಸಂಭವಿಸಿ ಕೃಷಿಕೂಲಿಕಾರ್ಮಿಕರು, ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ರಸ್ತೆ, ನಿವೇಶನ, ಮನೆ ಸಿಗದೇ ಪರದಾಡುತ್ತಿದ್ದಾರೆ. ಭೂಮಿ ಹಂಚಿಕೆ ಮಾಡಿಲ್ಲ. ನಿವೇಶನ, ಮನೆರಹಿತರು ಅರ್ಜಿ ಸಲ್ಲಿಸಿ ವರ್ಷ ಕಳೆದರೂ, ಇದುವರೆಗೂ ಬಡಜನರಿಗೆ ನಿವೇಶನ, ಮನೆ ಹಂಚಿಕೆ ಮಾಡಿಲ್ಲ ಎಂದರು.

ADVERTISEMENT

ರೈತರು ಬೆಳೆದ ಬೆಳೆಗಳಿಗೆ ಬೆಂಬಲ ನೀಡುತ್ತಿಲ್ಲ. ದೇಶದ ಶ್ರೀಮಂತರಿಗೆ, ವ್ಯಾಪಾರಸ್ಥರಿಗೆ ಅನುಕೂಲ ಮಾಡುವ ಕಾನೂನುಗಳು ಜಾರಿ ಇದೆ. ಆದರೆ ಜನಸಾಮಾನ್ಯರಿಗೆ ಅನುಕೂಲ ಮಾಡುವ ಮಸೂದೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡಿಲ್ಲ. ಅಗತ್ಯ ವಸ್ತುಗಳ ಏರಿಕೆ, ಕೃಷಿ ಮಸೂದೆಗಳ
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ರಸ್ತೆ, ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿದಂತೆ ಜನರಿಗೆ ಅಗತ್ಯ ಇರುವ ಯೋಜನೆಗಳನ್ನು ಜಾರಿ ಮಾಡದೇ, ಮತಾಂತರ ನಿಷೇಧ ಮಸೂದೆ ಜಾರಿ ಮಾಡಿದೆ. ಇದರಿಂದ ಒಂದು ಸಮುದಾಯವನ್ನು ಹೊಡೆಯುವ ತಂತ್ರ ಆಗಿದೆ. ಕೋಮುಸಂಘರ್ಷ
ಉಂಟು ಮಾಡಲು ಬಿಜೆಪಿ ಸರ್ಕಾರ ಮತಾಂತರ ನಿಷೇಧ ಮಸೂದೆ ಮಾಡಲು ಹೊರಟಿರುವುದು ಖಂಡನೀಯ ಎಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಗೋಪಾಲಕೃಷ್ಣ ಮಾತನಾಡಿ, ಕ್ಷೇತ್ರದಲ್ಲಿ 7 ವರ್ಷಗಳಿಂದ ಅನುದಾನ, ಶಾಶ್ವತ ಯೋಜನೆ, ಅಭಿವೃದ್ಧಿ ಇಲ್ಲ. ಸರ್ಕಾರಿ ಸೌಲಭ್ಯಗಳು ಪಡೆಯಲು ಜನರು, ವೃದ್ಧರು ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಇಲಾಖೆಗಳಲ್ಲಿ ವ್ಯಾಪಕ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗ್ರಾಮೀಣ ಪ್ರದೇಶಗಳಿಗೆ ಇಂದಿಗೂ ರಸ್ತೆ ಇಲ್ಲ. ಜನರು ತೊಂದರೆ ಪಡುತ್ತಿದ್ದಾರೆ ಎಂದರು.

ಸಮಾವೇಶದಲ್ಲಿ ಪ್ರಜಾ ಸಂಘರ್ಷ ಸಮಿತಿಯ ಚನ್ನರಾಯಪ್ಪ ತಂಡದವರಿಂದ ಕ್ರಾಂತಿಗೀತೆ ಹಾಡಿದರು.

ಮುಖಂಡ ಆರ್.ಎನ್.ರಾಜು, ಜಿ.ಎಂ.ರಾಮಕೃಷ್ಣಪ್ಪ, ಎಚ್.ಎನ್.ಚಂದ್ರಶೇಖರರೆಡ್ಡಿ, ಆರ್.ಚಂದ್ರಶೇಖರ ರೆಡ್ಡಿ, ಟಿ.ಎಲ್.ವೆಂಕಟೇಶ್, ಜುಬೇರ್ ಅಹಮದ್, ಎ.ಎಲ್.ವೆಂಕಟೇಶ್, ನಾರಾಯಣಸ್ವಾಮಿ, ಸಿ.ಕೆ.ನರಸಿಂಹಪ್ಪ, ಬಾಷಾಸಾಬ್, ನಾರಾಯಣನಾಯಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.