
ಪ್ರಾತಿನಿಧಿಕ ಚಿತ್ರ
ಬಾಗೇಪಲ್ಲಿ: ಅಡುಗೆ ಕೆಲಸಗಾರರ ಸಾಮಾಜಿಕ ಸುರಕ್ಷತೆ ಮತ್ತು ಸರ್ಕಾರಿ ಸೌಲಭ್ಯಗಳಿಗಾಗಿ ಪ್ರತ್ಯೇಕ ಕಲ್ಯಾಣ ಮಂಡಳಿ ರಚಿಸಬೇಕು ಎಂದು ರಾಜ್ಯ ಅಡುಗೆ ಕೆಲಸಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಎಸ್.ರಮೇಶ್‌ಬಾಬು ಒತ್ತಾಯಿಸಿದರು.
ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ವಿವಾಹ, ನಾಮಕರಣ, ಜಾತ್ರೆ ಮುಂತಾದ ಕಾರ್ಯಕ್ರಮಗಳಲ್ಲಿ ಕೆಲಸ ಮಾಡುವ ಅಡುಗೆ ಕೆಲಸಗಾರರು ಸಾಮಾಜಿಕ ಭದ್ರತೆ ಇಲ್ಲದೆ ಅಪಾಯಕಾರಿ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಹೆಚ್ಚಾಗಿ ಬಡ ಹಿನ್ನೆಲೆಯವರಾಗಿದ್ದು, ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿದ್ದಾರೆ. ಅವರನ್ನು ಅಸಂಘಟಿತ ಕಾರ್ಮಿಕ ವರ್ಗದಲ್ಲಿ ಸೇರಿಸಿದರೂ ಅವರ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಮಂಡಳಿ ಅಗತ್ಯವಿದೆ ಎಂದರು.
ಜನವರಿ 16ರಂದು ಕೋಲಾರದಲ್ಲಿ ನಡೆಯಲಿರುವ ರಾಜ್ಯ ಸಮಾವೇಶದಲ್ಲಿ ಕಾರ್ಮಿಕ ಸಚಿವರ ಎದುರು ಈ ಬೇಡಿಕೆ ಮುಂದಿಡಲಾಗುವುದು. ಈ ಸಮಾವೇಶಕ್ಕೆ ತಾಲ್ಲೂಕಿನ ಎಲ್ಲ ಅಡುಗೆ ಕೆಲಸಗಾರರು ಭಾಗವಹಿಸುವಂತೆ ಕೋರಲಾಯಿತು.
ಕಾರ್ಯಕ್ರಮದಲ್ಲಿ ಬಾಗೇಪಲ್ಲಿ ತಾಲ್ಲೂಕು ಅನ್ನಪೂರ್ಣೇಶ್ವರಿ ಅಡುಗೆ ಕೆಲಸಗಾರರ ಟ್ರಸ್ಟ್ ಅಧ್ಯಕ್ಷ ಡಿ.ಎನ್.ಶಿವಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಎಸ್.ಬಸವರಾಜ್ ಹಾಗೂ ಇತರರು ಹಾಜರಿದ್ದರು.
ಬಾಗೇಪಲ್ಲಿ: ಅಡುಗೆ ಕೆಲಸ ಮಾಡುವ ಅಸಂಘಟಿತರ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಸರ್ಕಾರದ ಸೌಲಭ್ಯಗಳು ಪಡೆಯಲು ಕೂಡಲೇ ರಾಜ್ಯ ಸರ್ಕಾರ ಅಡುಗೆ ಮಾಡುವ ಅಸಂಘಟಿತ ಕಾರ್ಮಿಕರು ಒಳಗೊಂಡಂತೆ ಪ್ರತ್ಯೇಕ ಕಲ್ಯಾಣ ಮಂಡಲಿ ಆರಂಭಿಸಬೇಕು ಎಂದು ರಾಜ್ಯ ಅಡುಗೆ ಕೆಲಸಗಾರರ ಮತ್ತು ಸಹಾಯಕರ ಕಾರ್ಮಿಕ ಕ್ಷೇಮಾಭಿವೃದ್ಧಿ ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಎಸ್.ರಮೇಶ್‍ಬಾಬು ಒತ್ತಾಯಿಸಿದ್ದಾರೆ.
ಪಟ್ಟಣದ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಶುಭವಿವಾಹಗಳು, ನಾಮಕರಣ, ಜಾತ್ರೆ ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಅಡುಗೆ ಕಾರ್ಮಿಕರು ಅಡುಗೆಗಳನ್ನು ಸಿದ್ಧಪಡಿಸುತ್ತಿದ್ದಾರೆ. ಆದರೆ ಅಡುಗೆ ತಯಾರಿಸುವವರಿಗೆ ಸಾಮಾಜಿಕ ಭದ್ರತೆ ಇಲ್ಲ. ಬೆಂಕಿ ಮತ್ತು ಭದ್ರತೆ ಇಲ್ಲದ ನಡುವೆ ಅಡುಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಸಾಮಾನ್ಯ ಬಡ ಕುಟುಂಬದವರು ಸಹ ಆಗಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದಾರೆ. ಅಡುಗೆ ಕಾರ್ಮಿಕರನ್ನು ಅಸಘಂಟಿತ ಕಾರ್ಮಿಕರ ವಲಯಕ್ಕೆ ಸರ್ಕಾರ ಸೇರಿಸಿದರೂ, ಅಡುಗೆ ಕಾರ್ಮಿಕರ ಅಭಿವೃದ್ಧಿಗೆ ಪ್ರತ್ಯೇಕ ಕಲ್ಯಾಣ ಮಂಡಲಿ ಸ್ಥಾಪನೆ ಮಾಡಬೇಕು ಎಂದು ತಿಳಿಸಿದರು.
ಜನವರಿ 16 ರಂದು ಕೋಲಾರದಲ್ಲಿ ಅಡುಗೆ ಕಾರ್ಮಿಕರ ಮತ್ತು ಸಹಾಯಕರ ಕಾರ್ಮಿಕರ ರಾಜ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವರಿಗೆ ಅಡುಗೆ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಅರ್ಜಿ ಸಲ್ಲಿಸಲಾಗುವುದು. ಪ್ರತ್ಯೇಕ ಕಲ್ಯಾಣ ಮಂಡಲಿ ರಚನೆ ಮಾಡುವಂತೆ ಮನವಿ ಮಾಡಲಾಗುವುದು. ತಾಲ್ಲೂಕಿನ ಎಲ್ಲಾ ಅಡುಗೆ ಕಾರ್ಮಿಕರು ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಸರ್ಕಾರದಿಂದ ಅಡುಗೆ ಕಾರ್ಮಿಕರ ಚೀಟಿಯನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ಬಾಗೇಪಲ್ಲಿ ತಾಲ್ಲೂಕು ಅನ್ನಪೂರ್ಣೇಶ್ವರಿ ಅಡುಗೆ ಕೆಲಸಗಾರರು ಮತ್ತು ಸಹಾಯಕ ಕಾರ್ಮಿಕರ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ದೇವರೆಡ್ಡಿಪಲ್ಲಿಡಿ.ಎನ್.ಶಿವಾರೆಡ್ಡಿ, ಪ್ರಧಾನಕಾರ್ಯದರ್ಶಿ ಎಸ್.ಬಸವರಾಜ್, ನರಸಿಂಹಪ್ಪ, ಬೂದಲಿಪಲ್ಲಿಚೌಡರೆಡ್ಡಿ, ನಾಗಪ್ಪ, ಮಂಜುನಾಥ್ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.