ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗುರುವಾರ 61 ಜನರಿಗೆ ಕೊರೊನಾ ಸೋಂಕು ತಗುಲಿದೆ. 113 ರೋಗಿಗಳು ಗುಣವಾಗಿದ್ದಾರೆ. ಚಿಕ್ಕಬಳ್ಳಾಪುರದ 83 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.
ಸೋಂಕಿಗೆ ತುತ್ತಾಗುತ್ತಿರುವವರ ಸಂಖ್ಯೆ ಇಳಿಕೆಯ ಹಾದಿಯಲ್ಲಿದೆ. ಪ್ರತಿದಿನವೂ ಸೋಂಕಿತರಿಗಿಂತ ಗುಣವಾಗುವವರ ಸಂಖ್ಯೆ ಹೆಚ್ಚಿದೆ. ಇನ್ನೂ 758 ಮಂದಿ ಮಾತ್ರ ಸಕ್ರಿಯ ಸೋಂಕಿತರು ಜಿಲ್ಲೆಯಲ್ಲಿ ಇದ್ದಾರೆ.
ಗುರುವಾರ ಚಿಕ್ಕಬಳ್ಳಾಪುರ ತಾಲ್ಲೂಕಿನ 15, ಬಾಗೇಪಲ್ಲಿ 9, ಚಿಂತಾಮಣಿ 6, ಗೌರಿಬಿದನೂರು 7, ಗುಡಿಬಂಡೆ 1 ಮತ್ತು ಶಿಡ್ಲಘಟ್ಟ ತಾಲ್ಲೂಕಿನ 23 ಜನರಿಗೆ ಸೋಂಕು ದೃಢವಾಗಿದೆ. ಇವರಲ್ಲಿ 17 ಮಹಿಳೆಯರು ಹಾಗೂ 44 ಪುರುಷರು ಇದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ 27, ಬಾಗೇಪಲ್ಲಿ 27, ಚಿಂತಾಮಣಿ 32, ಗೌರಿಬಿದನೂರು 6, ಗುಡಿಬಂಡೆ 8, ಶಿಡ್ಲಘಟ್ಟ ತಾಲ್ಲೂಕಿನ 13 ರೋಗಿಗಳು ಗುಣವಾಗಿದ್ದಾರೆ.
ಇದೇ ದಿನ 2,711 ಜನರ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಸಂಗ್ರಹಿಸಲಾಗಿದೆ. 18 ವರ್ಷದ ಮೇಲಿನ 12,868 ಮಂದಿ ಮೊದಲ ಡೋಸ್ ಲಸಿಕೆ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.