ADVERTISEMENT

‘ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ’

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 7:32 IST
Last Updated 11 ಜುಲೈ 2020, 7:32 IST
ಚಿಂತಾಮಣಿಯಲ್ಲಿ ಶುಕ್ರವಾರ ನಡೆದ ಕೊರೊನಾ ನಿಯಂತ್ರಣ ಪರಿಶೀಲನಾ ಸಭೆಯಲ್ಲಿ ಶಾಸಕ ಎಂ.ಕೃಷ್ಣಾರೆಡ್ಡಿ, ತಹಶೀಲ್ದಾರ್ ಹನುಮಂತರಾಯಪ್ಪ ಭಾಗವಹಿಸಿದ್ದರು
ಚಿಂತಾಮಣಿಯಲ್ಲಿ ಶುಕ್ರವಾರ ನಡೆದ ಕೊರೊನಾ ನಿಯಂತ್ರಣ ಪರಿಶೀಲನಾ ಸಭೆಯಲ್ಲಿ ಶಾಸಕ ಎಂ.ಕೃಷ್ಣಾರೆಡ್ಡಿ, ತಹಶೀಲ್ದಾರ್ ಹನುಮಂತರಾಯಪ್ಪ ಭಾಗವಹಿಸಿದ್ದರು   

ಚಿಂತಾಮಣಿ: ಕೊರೊನಾ ಹರಡುವುದನ್ನು ತಡೆಗಟ್ಟಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸದ ಅಂಗಡಿಗಳ ಮಾಲೀಕರಿಗೆ ಮತ್ತು ಸಾರ್ವಜನಿಕರಿಗೆ ಕಡ್ಡಾಯವಾಗಿ ದಂಡ ವಿಧಿಸುವಂತೆ ಶಾಸಕ ಎಂ.ಕೃಷ್ಣಾರೆಡ್ಡಿ ತಿಳಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್-19 ನಿಯಂತ್ರಣದ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಲು ಕರೆದಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಸೋಂಕಿತ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್‌ಗೆ ಸ್ಥಳಾಂತರಿಸಲು ವಿಶೇಷ ವಾಹನವನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಅಧಿಕಾರಿಗಳು ಕೊರೊನಾ ನಿಯಂತ್ರಣವನ್ನು ಲಘುವಾಗಿ ಪರಿಗಣಿಸದೆ ಗಂಭೀರವಾಗಿ ತೆಗೆದುಕೊಳ್ಳಬೇಕು. ಪಾಸಿಟಿವ್ ಬಂದ ಕೂಡಲೇ ಕೋವಿಡ್ ಆಸ್ಪತ್ರೆಗೆ ದಾಖಲಿಸಬೇಕು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.