ADVERTISEMENT

ಚಿಕ್ಕಬಳ್ಳಾಪುರ | 127ಕ್ಕೆ ಏರಿದ ಸೋಂಕಿತರ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 26 ಮೇ 2020, 17:14 IST
Last Updated 26 ಮೇ 2020, 17:14 IST

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿಯಲ್ಲಿ ಮಂಗಳವಾರ ಮಹಾರಾಷ್ಟ್ರದಿಂದ ವಾಪಸ್ಸಾದ ಮತ್ತೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 127ಕ್ಕೇರಿದೆ.

ಜಿಲ್ಲೆಯಲ್ಲಿ ಆರು ದಿನಗಳಲ್ಲಿ ಹೊಸದಾಗಿ 100 ಕೋವಿಡ್‌–19 ಪ್ರಕರಣಗಳು ವರದಿಯಾಗಿವೆ.

ಮುಂಬೈನಿಂದ ಮೇ 19ರಂದು ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ 138 ಮತ್ತು ಬಾಗೇಪಲ್ಲಿ ತಾಲ್ಲೂಕಿನ 109 ಸೇರಿದಂತೆ 247 ಜನರು ವಾಪಸ್ಸಾಗಿದ್ದರು. ಜಿಲ್ಲೆಯಲ್ಲಿ ಈವರೆಗೆ ಗೌರಿಬಿದನೂರು, ಚಿಕ್ಕಬಳ್ಳಾಪುರ ಮತ್ತು ಚಿಂತಾಮಣಿಯಲ್ಲಿ ಮಾತ್ರ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದವು. ಇದೀಗ ವಲಸಿಗರಿಂದಾಗಿ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಕೂಡ ಪ್ರಕರಣಗಳು ಕಾಣಿಸಿಕೊಂಡಿವೆ.

ADVERTISEMENT

ಜಿಲ್ಲೆಯಲ್ಲಿ ಈವರೆಗೆ ಗೌರಿಬಿದನೂರಿನಲ್ಲಿ 71, ಚಿಕ್ಕಬಳ್ಳಾಪುರದಲ್ಲಿ 8, ಚಿಂತಾಮಣಿಯಲ್ಲಿ 5 ಮತ್ತು ಬಾಗೇಪಲ್ಲಿಯಲ್ಲಿ 43 ಪ್ರಕರಣಗಳು ಸೇರಿ ಒಟ್ಟು 127 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇಬ್ಬರು(ಗೌರಿಬಿದನೂರು, ಚಿಕ್ಕಬಳ್ಳಾಪುರದ ತಲಾ ಒಬ್ಬರು) ಮೃತಪಟ್ಟಿದ್ದಾರೆ. ಉಳಿದಂತೆ 19 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲಾ ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ 106 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.