ADVERTISEMENT

ಬಾಗೇಪಲ್ಲಿ: ಗರ್ಭಿಣಿಗೆ ಎರಡನೇ ಪರೀಕ್ಷೆಯಲ್ಲಿ ನೆಗಟಿವ್

​ಪ್ರಜಾವಾಣಿ ವಾರ್ತೆ
Published 28 ಮೇ 2020, 17:26 IST
Last Updated 28 ಮೇ 2020, 17:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಾಗೇಪಲ್ಲಿ: ಪಟ್ಟಣದ 22ನೇ ವಾರ್ಡ್‌ನ ಗರ್ಭಿಣಿಗೆ ಎರಡನೇ ಬಾರಿ ನಡೆಸಿದ ಪರೀಕ್ಷೆಯ ವರದಿ ನೆಗಿಟಿವ್ ಬಂದಿದೆ.

ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮೇ 20ರಂದು ಗರ್ಭಿಣಿಗೆ ಕೋವಿಡ್ ಪರೀಕ್ಷೆಗೆ ಮಾಡಿಸಿದ್ದರು. ಮೇ 24ರಂದು ಬಂದ ವರದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಗರ್ಭಿಣಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅವರೆಲ್ಲರ ವರದಿ ಮಂಗಳವಾರ ನೆಗೆಟಿವ್‌ ಬಂದಿತ್ತು.

ಈ ಹಿನ್ನೆಲೆಯಲ್ಲಿ ಗರ್ಭಿಣಿಯ ಗಂಟಲು ದ್ರವವನ್ನು ಮತ್ತೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಗುರುವಾರ ಪರೀಕ್ಷಾ ವರದಿ ನೆಗೆಟಿವ್‌ ಬಂದಿದೆ.

ADVERTISEMENT

ಇನ್ನೊಮ್ಮೆ ಖಚಿತಪಡಿಸಿಕೊಳ್ಳಲು ಮೂರನೇ ಬಾರಿಗೆ ಗುರುವಾರ ಬೆಳಿಗ್ಗೆ ಗರ್ಭಿಣಿಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಶನಿವಾರ ಬರುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.