ADVERTISEMENT

ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ: ನ್ಯಾಯ ಒದಗಿಸುವ ಭರವಸೆ

​ಪ್ರಜಾವಾಣಿ ವಾರ್ತೆ
Published 24 ಮೇ 2020, 17:11 IST
Last Updated 24 ಮೇ 2020, 17:11 IST
ಚಿಂತಾಮಣಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಶಾ ಕಾರ್ಯಕರ್ತೆಗೆ ತಹಶೀಲ್ದಾರ್ ಹನುಮಂತರಾಯಪ್ಪ ಸಾಂತ್ವನ ಹೇಳಿದರು
ಚಿಂತಾಮಣಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಶಾ ಕಾರ್ಯಕರ್ತೆಗೆ ತಹಶೀಲ್ದಾರ್ ಹನುಮಂತರಾಯಪ್ಪ ಸಾಂತ್ವನ ಹೇಳಿದರು   

ಚಿಂತಾಮಣಿ: ತಾಲ್ಲೂಕಿನ ಐಮರೆಡ್ಡಿಹಳ್ಳಿಯಲ್ಲಿ ಹಲ್ಲೆಗೆ ಒಳಗಾದ ಆಶಾ ಕಾರ್ಯಕರ್ತೆ ವೆಂಕಟಲಕ್ಷ್ಮಮ್ಮ ಅವರನ್ನು ತಹಶೀಲ್ದಾರ್ ಹನುಮಂತರಾಯಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದರು.

ಅಂತರ ರಾಜ್ಯ ಸಂಚರಿಸುವ ಲಾರಿಗಳಲ್ಲಿ ಚಾಲಕನಾಗಿ ಕೆಲಸ ಮಾಡುವ ನಾಗರಾಜ್ ಮನೆಗೆ ಬಂದಿದ್ದರು. ಸೋಂಕಿನ ಸರ್ವೆ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಮತ್ತು ಕ್ವಾರಂಟೈನ್ ಆಗುವಂತೆ ಸಲಹೆ ನೀಡಿದರು.

ಇದರಿಂದ ಕುಪಿತಗೊಂಡು ನಾಗರಾಜ್ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೆಂಕಟಲಕ್ಷ್ಮಮ್ಮ ಅವರನ್ನು
ಭಾನುವಾರ ತಹಶೀಲ್ದಾರ್ ಭೇಟಿ ಮಾಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಆರೋಪಿಯನ್ನು ಬಂಧಿಸುವಂತೆ ಈಗಾಗಲೇ ಎಸ್ಪಿ ಆದೇಶ ನೀಡಿದ್ದಾರೆ. ಕಾನೂನಿನಂತೆ ಕ್ರಮ ಕೈಗೊಂಡು ತಮಗೆ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.