ADVERTISEMENT

ಶಿಡ್ಲಘಟ್ಟ: ಎಸ್ಐಗೆ ಕೋವಿಡ್ ಸೋಂಕು‌ ದೃಢ

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 7:49 IST
Last Updated 27 ಜೂನ್ 2020, 7:49 IST
ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಎಸ್ಐ ಬಳಸುತ್ತಿದ್ದ ವಾಹನವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ವೈರಸ್ ನಾಶಕ ದ್ರಾವಣದಿಂದ ಶುಚಿಗೊಳಿಸಿದರು.
ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಎಸ್ಐ ಬಳಸುತ್ತಿದ್ದ ವಾಹನವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ವೈರಸ್ ನಾಶಕ ದ್ರಾವಣದಿಂದ ಶುಚಿಗೊಳಿಸಿದರು.   

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಗ್ರಾಮಾಂತರ ಠಾಣೆಯ ಸಬ್‌ಇನ್ಸ್‌ಸ್ಪೆಕ್ಟರ್ ಅವರಿಗೆ ಕೋವಿಡ್ ಸೋಂಕು ಇರುವುದು ಶುಕ್ರವಾರ ರಾತ್ರಿ‌ ದೃಢಪಟ್ಟಿದೆ.

ಶನಿವಾರ ಬೆಳಿಗ್ಗೆ ಗ್ರಾಮಾಂತರ ಠಾಣೆ ಮತ್ತು ಕನಕನಗರದಲ್ಲಿರುವ ಎಸ್‌ಐ ಮನೆಯನ್ನು ವೈರಸ್ ನಾಶಕ ದ್ರಾವಣ ಸಿಂಪಡಿಸಿ ಶುಚಿಗೊಳಿಸಲಾಗಿದೆ. ಪ್ರಸ್ತುತ ಎಸ್‌ಐ ಮನೆ ಪ್ರದೇಶದಲ್ಲಿ ಸೀಲ್‌ಡೌನ್ ಮಾಡಲಾಗಿದೆ.

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಈವರೆಗೆ 8 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇತ್ತೀಚೆಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದು ನಾಗರಿಕರಲ್ಲಿ ಆತಂಕ ಉಂಟು ಮಾಡಿದೆ.

ADVERTISEMENT

ಜಿಲ್ಲೆಯಲ್ಲಿ ಈವರೆಗೆ 183 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಆ ಪೈಕಿ ಮೂರು ಜನರು‌ ಮೃತಪಟ್ಟಿದ್ದಾರೆ. ಚಿಕಿತ್ಸೆಯಿಂದ 152 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್ ವಾರ್ಡ್ ನಲ್ಲಿ‌ 28 ಸೋಂಕಿತರು‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.