ADVERTISEMENT

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2025, 7:03 IST
Last Updated 21 ಆಗಸ್ಟ್ 2025, 7:03 IST
ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು
ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು   

ಬೆಂಗಳೂರು: ಅಟಲ್‌ ಭೂ– ಜಲ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ತನಿಖೆ ನಡೆಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಪ್ರೊ.ನಂಜುಂಡಸ್ವಾಮಿ ಸ್ಥಾಪಿತ) ಚಿಕ್ಕಬಳ್ಳಾಪುರ ಜಿಲ್ಲೆ, ಬಾಗೇಪಲ್ಲಿ ತಾಲ್ಲೂಕು ಘಟಕದ ನೇತೃತ್ವದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

ರಾಜ್ಯದ 14 ಜಿಲ್ಲೆಗಳ, 41 ತಾಲ್ಲೂಕಿನ 1,199 ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಂಡಿದೆ. ಹಲವು ಕಡೆ ಭ್ರಷ್ಟಾಚಾರ ನಡೆದಿದ್ದು, ತನಿಖೆ ನಡೆಸುವಂತೆ ಪ್ರತಿಭಟನಕಾರರು ಆಗ್ರಹಿಸಿದರು.
ಗ್ರಾಮಸಭೆಗಳನ್ನು ನಡೆಸದೆ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ದೂರಿದರು.

ವಿಶ್ವ ಬ್ಯಾಂಕ್‌ ಹಾಗೂ ಕೇಂದ್ರ ಸರ್ಕಾರದ ಅನುದಾನದೊಂದಿಗೆ ದೇಶದ ವಿವಿಧ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿತ್ತು. ರಾಜ್ಯದಲ್ಲೂ ಈ ಯೋಜನೆ ಜಾರಿಗೆ ಬಂದಿದ್ದು ಭ್ರಷ್ಟಾಚಾರ ನಡೆದಿದೆ. ತನಿಖೆ ನಡೆಸುವಂತೆ ಪ್ರತಿಭಟನಕಾರರು ಒತ್ತಾಯಿಸಿದರು.

ADVERTISEMENT

ಪ್ರತಿಭಟನೆಯ ನೇತೃತ್ವವನ್ನು ಸೇನೆಯ ರಾಜ್ಯ ಅಧ್ಯಕ್ಷ ವಿ.ಆರ್.ನಾರಾಯಣರೆಡ್ಡಿ, ಹಳ್ಳಿಕೆರೆ ಹುಂಡಿ ಭಾಗ್ಯರಾಜ್, ಲಕ್ಷ್ಮಣ್, ಸಿ.ವಿ.ಶ್ರೀಕಾಂತ್‌ ರೆಡ್ಡಿ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.