ಶಿಡ್ಲಘಟ್ಟ: ಅಂಬೇಡ್ಕರ್ ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ಅವರ ಜಯಂತಿಯಂದು ಮಾತ್ರ ನಾವು ಸ್ಮರಿಸದೆ ದಿನನಿತ್ಯ ಅವರನ್ನು ಸ್ಮರಿಸುವಂತಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ತಿಳಿಸಿದರು.
ನಗರದ ನ್ಯಾಯಾಲಯದಲ್ಲಿ ಬುಧವಾರ ತಾಲ್ಲೂಕು ವಕೀಲರ ಸಂಘದಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದರು.
ಅಂಬೇಡ್ಕರ್ ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳನ್ನು ನೀಡಿದ್ದಾರೆ. ನಮ್ಮ ರಕ್ಷಣೆಗೆ ಕಾನೂನು ನೀಡಿದ್ದಾರೆ. ಇವೆಲ್ಲವನ್ನು ಅರಿತುಕೊಳ್ಳಬೇಕಿದೆ. ನಾವು ಪಾಲಿಸಬೇಕಾದ ಮೂಲಭೂತ ಕರ್ತವ್ಯಗಳನ್ನು ಮರೆತಿದ್ದೇವೆ. ನಾಗರಿಕರಾಗಿ ಪ್ರಾಮಾಣಿಕವಾಗಿ ಕಾನೂನುಗಳನ್ನು ಅರಿತು ಗೌರವಿಸಬೇಕು. ಸಂವಿಧಾನ ಆಶಯಗಳು ಹಾಗೂ ಸಾರ್ವಭೌಮತ್ವಕ್ಕೆ ಧಕ್ಕೆ ಆಗದಂತೆ ನಡೆದುಕೊಳ್ಳಬೇಕು ಎಂದರು.
ಪ್ರಧಾನ ಸಿವಿಲ್ ನ್ಯಾಯಾಧೀಶೆ ಪೂಜಾ.ಜೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ರಂಜಿತ. ಎಸ್, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಎ.ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ.ಭಾಸ್ಕರ್, ಹಿರಿಯ ವಕೀಲ ಎಂ.ಪಾಪಿರೆಡ್ಡಿ, ವಿದ್ಯಾ ವಸ್ತ್ರದ್, ವಿಜಯಲಕ್ಷ್ಮಿ, ವಕೀಲರ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.