ADVERTISEMENT

‘ಕೊರೊನಾ ಸೋಂಕು ಉದಾಸೀನತೆ ಬೇಡ’

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 3:33 IST
Last Updated 24 ನವೆಂಬರ್ 2020, 3:33 IST
ಚಿಂತಾಮಣಿಯಲ್ಲಿ ಇತ್ತೀಚೆಗೆ ನ್ಯಾಯಾಧೀಶರು ಪಾದಯಾತ್ರೆ ಮೂಲಕ ಕೊರೊನಾ ಸೋಂಕು ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸಿದರು
ಚಿಂತಾಮಣಿಯಲ್ಲಿ ಇತ್ತೀಚೆಗೆ ನ್ಯಾಯಾಧೀಶರು ಪಾದಯಾತ್ರೆ ಮೂಲಕ ಕೊರೊನಾ ಸೋಂಕು ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸಿದರು   

ಚಿಂತಾಮಣಿ: ‘ಕೋವಿಡ್-19 ಕಡಿಮೆಯಾಗುತ್ತದೆ ಎಂದು ಜನರು ಮೈಮರೆಯಬಾರದು. ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಎಂ. ರಾಜೇಂದ್ರಕುಮಾರ್ ಹೇಳಿದರು.

ನಗರದಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೊರೊನಾ ಜಾಗೃತಿ ಜಾಥಾದಲ್ಲಿ ಮಾತನಾಡಿದರು.

ವಿದೇಶಗಳು ಹಾಗೂ ದೇಶದ ಹಲವಾರು ರಾಜ್ಯಗಳಲ್ಲಿ ಕೊರೊನಾ ಸೋಂಕು ಮತ್ತೆ ತನ್ನ ಕಬಂಧಬಾಹುಗಳನ್ನು ಚಾಚುತ್ತಿದೆ. ಹೀಗಾಗಿ ಜನರು ಉದಾಸೀನತೆ ತೋರಬಾರದು. ಆರೋಗ್ಯವಂತರಾಗಿರಬೇಕಾದರೆ ಜಾಗೃತರಾಗಿರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಅಂತರ ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದರು.

ADVERTISEMENT

ಸಾರ್ವಜನಿಕ ಸ್ಥಳಗಳಲ್ಲಿ ಒಬ್ಬರಿಂದ ಒಬ್ಬರಿಗೆ ಕೊರೊನಾ ಅಟ್ಟಹಾಸವನ್ನು ಮೆರೆಯುತ್ತದೆ. ಅದನ್ನು ಮಟ್ಟಹಾಕಬೇಕಾದರೆ ಸದ್ಯಕ್ಕೆ ಜಾಗೃತಿಯೇ ಮಾರ್ಗವಾಗಿದೆ. ಕೊರೊನಾ ಮಾರ್ಗಸೂಚಿ ಪಾಲಿಸುವುದರ ಜತೆಗೆ ಸುತ್ತಮುತ್ತಲಿನ ಜನರಿಗೂ ಮಾಹಿತಿ ನೀಡಬೇಕು ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಜಿ.ಜೆ. ಶಿವಕುಮಾರ್ ಮಾತನಾಡಿ, ಅಂಗಡಿಗಳ ಮುಂದೆ ಗುಂಪುಗಾರಿಕೆಗೆ ಅವಕಾಶ ನೀಡಬೇಡಿ. ಗ್ರಾಹಕರು ಅಂತರವನ್ನು ಕಾಪಾಡಿಕೊಡಿಕೊಂಡು ನಿಂತುಕೊಳ್ಳಲು ತಿಳಿಸಬೇಕು. ಆದಷ್ಟು ಜಾಗ್ರತೆಯಾಗಿ ಅವರಿಗೆ ಬೇಕಾದ ವಸ್ತುಗಳನ್ನು ನೀಡಿ ಕಳುಹಿಸಬೇಕು. ಅಂಗಡಿಗಳ ಬಳಿ ಸ್ವಚ್ಛತೆ ಕಾಪಾಡಬೇಕು. ಮಾಲೀಕರು ಮಾಸ್ಕ್ ಧರಿಸಬೇಕು ಎಂದು ಹೇಳಿದರು.

ನಗರದ ಪ್ರವಾಸಿಮಂದಿರದಿಂದ ನ್ಯಾಯಾಧೀಶರು ಪಾದಯಾತ್ರೆ ನಡೆಸಿದರು. ವಕೀಲರ ಸಂಘದ ಅಧ್ಯಕ್ಷ ಎಸ್. ರಾಜಾರಾಂ, ಉಪಾಧ್ಯಕ್ಷ ಶಿವಾನಂದ್, ಸಬ್ ಇನ್‌ಸ್ಪೆಕ್ಟರ್ ನಾರಾಯಣಸ್ವಾಮಿ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.