ADVERTISEMENT

ಸೋಂಕಿತರ ಸಂಖ್ಯೆ 6,959ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 2:16 IST
Last Updated 27 ಸೆಪ್ಟೆಂಬರ್ 2020, 2:16 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 96 ಜನರಲ್ಲಿ ಕೋವಿಡ್‌ 19 ದೃಢಪಟ್ಟಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,959ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಶನಿವಾರದವರೆಗೆ 1,05,878 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 98,860 ಜನರ ವರದಿಗಳು ನೆಗೆಟಿವ್ ಬಂದಿವೆ. ಈವರೆಗೆ 83 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 5,726 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಶನಿವಾರ 13 ಸೋಂಕಿತರು ಗುಣಮುಖರಾಗಿದ್ದು, ಸದ್ಯ ಕೋವಿಡ್‌ ಆಸ್ಪತ್ರೆಯಲ್ಲಿ 1,150 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT