ADVERTISEMENT

6,000ದ ಗಡಿ ದಾಟಿದ ಕೋವಿಡ್

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2020, 16:16 IST
Last Updated 15 ಸೆಪ್ಟೆಂಬರ್ 2020, 16:16 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 152 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಕೋವಿಡ್ ಸೋಂಕಿತರ ಸಂಖ್ಯೆ 6,000ದ ಗಡಿ ದಾಟಿದೆ.

ಜಿಲ್ಲೆಯಲ್ಲಿ ಮಂಗಳವಾರದ ವರೆಗೆ 6,021 ಪ್ರಕರಣಗಳು ವರದಿಯಾಗಿದ್ದು, ಈ ದಿನ 168 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮಂಗಳವಾರದವರೆಗೆ 95,749 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಆ ಪೈಕಿ 88,728 ಜನರ ವರದಿಗಳು ನೆಗೆಟಿವ್ ಬಂದಿವೆ.

ADVERTISEMENT

ಈವರೆಗೆ 74 ಮಂದಿ ಮೃತಪಟ್ಟರೆ, 4,994 ಸೋಂಕಿತರು ಗುಣಮುಖರಾಗಿದ್ದಾರೆ. ಪ್ರಸ್ತುತ ಕೋವಿಡ್‌ ಆಸ್ಪತ್ರೆಯಲ್ಲಿ 953 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಟ್ಟಿ..

ಜಿಲ್ಲೆಯಲ್ಲಿ ತಾಲ್ಲೂಕುವಾರು ಕೋವಿಡ್‌ ಪ್ರಕರಣಗಳ ವಿವರ

ತಾಲ್ಲೂಕು;ಸೆಪ್ಟೆಂಬರ್ 15;ಒಟ್ಟು;ಬಿಡುಗಡೆ;ಒಟ್ಟು ಬಿಡುಗಡೆ;ಸಕ್ರಿಯ ಪ್ರಕರಣ;ಸಾವು

ಚಿಕ್ಕಬಳ್ಳಾಪುರ;‌43;1,951;50;1,692;234;24

ಬಾಗೇಪಲ್ಲಿ;‌16;837;34;648;182;8

ಚಿಂತಾಮಣಿ;‌12;1,002;13;846;136;20

ಗೌರಿಬಿದನೂರು;‌37;1,318;40;1,063;240;15

ಗುಡಿಬಂಡೆ;‌10;266;4;232;33;1

ಶಿಡ್ಲಘಟ್ಟ;‌34;647;27;513;128;6

ಒಟ್ಟು;‌152;6,021;168;4,994;953;74

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.