ADVERTISEMENT

ಕೋವಿಡ್‌ ಸೋಂಕಿತ ಸಂಖ್ಯೆ 160ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2020, 16:06 IST
Last Updated 20 ಜೂನ್ 2020, 16:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶನಿವಾರ ಎರಡು ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 160ಕ್ಕೆ ಏರಿಕೆಯಾಗಿದೆ.

ಶನಿವಾರ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ 23 ವರ್ಷ ಮತ್ತು 17 ವರ್ಷದ ಇಬ್ಬರು ಯುವಕರಲ್ಲಿ ಕೋವಿಡ್ ಇರುವುದು ಪತ್ತೆಯಾಗಿದೆ.

ಪ್ರಸ್ತುತ ಜಿಲ್ಲಾ ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ 8 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರದವರೆಗೆ ಜಿಲ್ಲೆಯಲ್ಲಿ 13,195 ಜನರ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆ ಪೈಕಿ 12,567ಮಂದಿಯಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ.

ADVERTISEMENT

ಮುಂಬೈನಿಂದ ಜಿಲ್ಲೆಗೆ ವಾಪಾಸದವರ 388 ಜನರ ಪೈಕಿ ಈವರೆಗೆ 122 ಜನರಲ್ಲಿ ಕೋವಿಡ್ ಇರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.