ADVERTISEMENT

ಚಿಕ್ಕಬಳ್ಳಾಪುರ | ಕೋವಿಡ್‌ ಸೋಂಕಿತರ ಸಂಖ್ಯೆ 265ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 14:44 IST
Last Updated 6 ಜುಲೈ 2020, 14:44 IST
   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸೋಮವಾರ ಏಳು ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 265ಕ್ಕೆ ಏರಿಕೆಯಾಗಿದೆ.

ಭಾನುವಾರ ಮೃತಪಟ್ಟ ಗೌರಿಬಿದನೂರಿನ ಪೀರಸಾಬಿ ಗಲ್ಲಿನ ನಿವಾಸಿ 60 ವರ್ಷದ ವೃದ್ಧನಿಗೆ ಕೂಡ ಕೋವಿಡ್‌ ತಗುಲಿರುವುದು ಗಂಟಲು ದ್ರವ ಮಾದರಿ ವರದಿಯಲ್ಲಿ ದೃಢಪಟ್ಟಿದೆ.

ಸೋಮವಾರ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಐದು, ಗೌರಿಬಿದನೂರು ತಾಲ್ಲೂಕಿನ ಇಬ್ಬರಲ್ಲಿ ಕೋವಿಡ್ ಇರುವುದು ಪತ್ತೆಯಾಗಿದೆ. ಈವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 65, ಬಾಗೇಪಲ್ಲಿ 54, ಚಿಂತಾಮಣಿ 27, ಗೌರಿಬಿದನೂರು 102, ಶಿಡ್ಲಘಟ್ಟ ತಾಲ್ಲೂಕಿನಲ್ಲಿ 17 ಜನರಿಗೆ ಕೋವಿಡ್ ಸೋಂಕು ತಗುಲಿದೆ.

ADVERTISEMENT

ಸೋಂಕಿತರ ಪೈಕಿ ಐದು ಮಂದಿ ಕೋವಿಡ್‌ನಿಂದ, ಮೂರು ವಿವಿಧ ಕಾಯಿಲೆಗಳಿಂದ ಮೃತಪಟ್ಟಿದ್ಧಾರೆ. ಚಿಕಿತ್ಸೆಯಿಂದ 197 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್‌ ವಾರ್ಡ್‌ನಲ್ಲಿ 60 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.