ADVERTISEMENT

ಕೋವಿಡ್ ಸೋಂಕಿತರ ಸಂಖ್ಯೆ 172ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2020, 14:41 IST
Last Updated 23 ಜೂನ್ 2020, 14:41 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಂಗಳವಾರ ಐದು ಮಹಿಳೆಯರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 172ಕ್ಕೆ ಏರಿಕೆಯಾಗಿದೆ.

ಮಂಗಳವಾರ ಗೌರಿಬಿದನೂರು ತಾಲ್ಲೂಕಿನ 20 ವರ್ಷದ ಯುವತಿ, ಶಿಡ್ಲಘಟ್ಟ ತಾಲ್ಲೂಕಿನ 21, 22, 24 ವಯಸ್ಸಿನ ಮೂರು ಯುವತಿಯರು ಮತ್ತು ಚಿಂತಾಮಣಿ ತಾಲ್ಲೂಕಿನ 44 ವರ್ಷದ ಮಹಿಳೆಯೊಬ್ಬರಲ್ಲಿ ಕೋವಿಡ್‌ ಇರುವುದು ಪತ್ತೆಯಾಗಿದೆ.

ಜಿಲ್ಲೆಗೆ ಮುಂಬೈನಿಂದ ವಾಪಾಸಾದ 340 ಜನರ ಪೈಕಿ ಈವರೆಗೆ 124 ಜನರಲ್ಲಿ ಕೋವಿಡ್ ಇರುವುದು ದೃಢಪಟ್ಟಿದೆ. ಈವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 16, ಬಾಗೇಪಲ್ಲಿ 53, ಚಿಂತಾಮಣಿ 12, ಗೌರಿಬಿದನೂರು 84, ಶಿಡ್ಲಘಟ್ಟ 7 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಪ್ರಸ್ತುತ ಜಿಲ್ಲಾ ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ 22 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.