ADVERTISEMENT

ಚಿಕ್ಕಬಳ್ಳಾಪುರದಲ್ಲಿ ಲಸಿಕೆ ಅಭಿಯಾನಕ್ಕೆ ಉತ್ತಮ ಸ್ಪಂದನೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 3:21 IST
Last Updated 4 ಆಗಸ್ಟ್ 2021, 3:21 IST
ಆರ್.ಲತಾ
ಆರ್.ಲತಾ   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಜಿಲ್ಲೆಯಲ್ಲಿ ಆ.3ರ ಅಂತ್ಯಕ್ಕೆ ಒಟ್ಟು 6,08,337 ಲಕ್ಷ ಮಂದಿಗೆ ಉಚಿತ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ
ತಿಳಿಸಿದ್ದಾರೆ.

ಇವರಲ್ಲಿ 4,75,922 ಮಂದಿಗೆ ಮೊದಲ ಡೋಸ್ ಮತ್ತು 1,32,415 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಕಡ್ಡಾಯವಾಗಿ ಲಸಿಕೆ ಹಾಕಬೇಕು ಎನ್ನುವ ‌ಉದ್ದೇಶದಿಂದ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ಉಚಿತ ಲಸಿಕೆ ಮೇಳ ಆಯೋಜಿಸ
ಲಾಗುತ್ತಿದೆ. ಇದಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಸಹ ದೊರೆತಿದೆ
ಎಂದಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಹಲವು ಆಸ್ಪತ್ರೆ, ಕಾಲೇಜುಗಳಲ್ಲಿ ಲಸಿಕಾ ಮೇಳಗಳನ್ನು ಆಯೋಜಿಸಲಾಗಿದೆ. ಅಗತ್ಯವುಳ್ಳವರಿಗೆ ಲಸಿಕೆ ಹಾಕಲಾಗಿದೆ. ಜೂ.21 ರಂದು ಮೆಗಾ ಲಸಿಕಾ ಮೇಳ ಆಯೋಜಿಸಿ ಅತಿಹೆಚ್ಚು ಜನರಿಗೆ ಲಸಿಕೆ ಹಾಕಲಾಗಿತ್ತು.ಆಗ ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನ ಪಡೆದಿತ್ತು
ಎಂದು ಹೇಳಿದ್ದಾರೆ.

ADVERTISEMENT

ಆ.2 ರಂದು ಆಯೋಜಿಸಿದ್ದ 2ನೇ ಮೆಗಾ ಲಸಿಕಾ ಮೇಳದಲ್ಲಿ 21 ಸಾವಿರ ಜನರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. ಈ ಗುರಿ ಮೀರಿ ಒಟ್ಟು 23,196 ಮಂದಿಗೆ ಲಸಿಕೆ ಹಾಕಲಾಗಿದೆ. ಈ ಮೇಳದಲ್ಲಿ ‌ಬಾಗೇಪಲ್ಲಿಯಲ್ಲಿ 3,834, ಚಿಕ್ಕಬಳ್ಳಾಪುರದಲ್ಲಿ 3,368, ಚಿಂತಾಮಣಿಯಲ್ಲಿ 5,863, ಗೌರಿಬಿದನೂರಿನಲ್ಲಿ 5,231, ಗುಡಿಬಂಡೆಯಲ್ಲಿ 1,098 ಹಾಗೂ ಶಿಡ್ಲಘಟ್ಟ ತಾಲ್ಲೂಕಿನಲ್ಲಿ 3,802 ಜನರಿಗೆ ಉಚಿತ ಲಸಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.