ADVERTISEMENT

ಇಂದಿನಿಂದ ಕೋವಿಡ್ ಲಸಿಕೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 5:27 IST
Last Updated 8 ಮಾರ್ಚ್ 2021, 5:27 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಅಭಿಯಾನ ಈಗಾಗಲೇ ಚಾಲನೆಯಲ್ಲಿದ್ದು ಮಾ. 8ರಿಂದ ಜಿಲ್ಲೆಯ ಎಲ್ಲ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಹಾಗೂ ಚಿಕ್ಕಬಳ್ಳಾಪುರ ತಾಲ್ಲೂಕಿನ ಖಾಸಗಿ ಆಸ್ಪತ್ರೆಗಳಾದ ಅನನ್ಯ, ಸುರಕ್ಷಾ, ಸಿಎಸ್‌ಐ ಆಸ್ಪತ್ರೆಗಳಲ್ಲಿ ಮತ್ತು ಚಿಂತಾಮಣಿ ತಾಲ್ಲೂಕಿನ ಡೆಕ್ಕನ್ ಆಸ್ಪತ್ರೆಯಲ್ಲಿ ಲಸಿಕೆ ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದ್ದಾರೆ.

60 ವರ್ಷ ಮೇಲ್ಪಟ್ಟವರು ಹಾಗೂ 45 ವರ್ಷದಿಂದ 59 ವರ್ಷದ ಒಳಗಿದ್ದು ಅನಾರೋಗ್ಯಕ್ಕೆ ತುತ್ತಾದವರು, ಮೊದಲ ಹಂತದಲ್ಲಿ ಲಸಿಕೆ ಪಡೆಯದ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಲಸಿಕೆ ಪಡೆಯಬಹುದು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೋಮವಾರ, ಬುಧವಾರ, ಶುಕ್ರವಾರ, ಶನಿವಾರ ಹಾಗೂ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 10ರಿಂದ ಸಂಜೆ 4 ರವರೆಗೆ ಲಸಿಕೆ ಪಡೆಯಬಹುದು
ಎಂದಿದ್ದಾರೆ.

ಸಹಾಯವಾಣಿ 104, ಜಿಲ್ಲಾ ಲಸಿಕಾ ಕಂಟ್ರೋಲ್ ರೂಂ 08156-277252, ಜಿಲ್ಲಾ ಲಸಿಕಾ ಅಧಿಕಾರಿಗಳು 94498 43191, ಜಿಲ್ಲಾ ಸರ್ವೇಕ್ಷಣಾಧಿಕಾರಿ 94800 81021 ಮೊಬೈಲ್‌ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.