ADVERTISEMENT

‘ಶೀಘ್ರ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ’

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 15:27 IST
Last Updated 23 ಜೂನ್ 2021, 15:27 IST
ಡಾ.ಕೆ.ಸುಧಾಕರ್‌
ಡಾ.ಕೆ.ಸುಧಾಕರ್‌   

ಚಿಕ್ಕಬಳ್ಳಾಪುರ: ‌18 ವರ್ಷ ಮೀರಿದ ಎಲ್ಲ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಿ ಕಾಲೇಜುಗಳನ್ನು ಆರಂಭಿಸಲಾಗುವುದು. ನಂತರ ಶಾಲೆಗಳ ಆರಂಭದ ಬಗ್ಗೆ ನಿರ್ಧರಿಸಲಾಗುವುದು. ಶೀಘ್ರದಲ್ಲೇ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಗರದಲ್ಲಿ ಬುಧವಾರ ಮಾತನಾಡಿದ ಅವರು, ಕೊರೊನಾ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಸಿದ್ಧತೆ ನಡೆಸಿದ್ದು ಪ್ರತಿ ಜಿಲ್ಲೆಯಲ್ಲಿ 50ರಿಂದ 60 ಹಾಸಿಗೆಗಳನ್ನು ಮಕ್ಕಳ ಚಿಕಿತ್ಸೆಗೆ ಸಿದ್ಧಪಡಿಸಲಾಗುತ್ತಿದೆ. ಜತೆಗೆ ಮಕ್ಕಳ ವಿಶೇಷ ನಿಗಾ ಘಟಕಗಳನ್ನೂ ಸ್ಥಾಪಿಸಲಾಗುವುದು ಎಂದು

ಈಗಾಗಲೇ ರಾಜ್ಯದಲ್ಲಿ ಎರಡೂ ಕೋಟಿಗೂ ಹೆಚ್ಚು ಮಂದಿಗೆ ಲಸಿಕೆ ನೀಡಲಾಗಿದೆ. ರಾಜ್ಯದ ಆರೋಗ್ಯ ಕ್ಷೇತ್ರದ ಸುಧಾರಣೆ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಕೆಳ ಹಂತದ ಚಿಕಿತ್ಸಾ ವ್ಯವಸ್ಥೆ ಸುಧಾರಿಸಲು 250 ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳನ್ನು ಮಾದರಿ ಚಿಕಿತ್ಸಾ ಕೇಂದ್ರಗಳನ್ನಾಗಿ ಮಾರ್ಪಡಿಸಲಾಗುವುದು ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.