ಆಪರೇಷನ್ ಸಿಂಧೂರ
ಬಾಗೇಪಲ್ಲಿ: ಪಗಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಕ್ರಮಗಳಿಗೆ ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿವೆ. ಇದಕ್ಕೆ ನಮ್ಮ ಬೆಂಬಲವೂ ಇದೆ ಎಂದು ಸಿಪಿಐ(ಎಂ) ಪ್ಯೊಲಿಟ್ ಬ್ಯೂರೊ ಹೇಳಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಲಿ ಸದಸ್ಯ ಎಂ.ಪಿ.ಮುನಿವೆಂಕಟಪ್ಪ ತಿಳಿಸಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರ (ಪಿಓಕೆ) ಮತ್ತು ಪಾಕಿಸ್ತಾನದಲ್ಲಿನ ಭಯೋತ್ಪಾದಕರ ಶಿಬಿರ ಮತ್ತು ಮೂಸೌಕರ್ಯಗಳನ್ನು ನಾಶಪಡಿಸಲು ಭಾರತೀಯ ಸಶಸ್ತ್ರ ಪಡೆಗಳು ಅಪರೇಷನ್ ಸಿಂಧೂರ ನಡೆಸಿದ್ದು, ಇದಕ್ಕೆ ನಮ್ಮ ಬೆಂಬಲವಿದೆ. ಇದರಿಂದ ಹಲವಡೆ ಶಿಬಿರಗಳನ್ನು ಧ್ವಂಸ ಮಾಡಿವೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.