ADVERTISEMENT

ಕಾರ್ತಿಕ ಸೋಮವಾರ, ಧಾರ್ಮಿಕ ಕಾರ್ಯಕ್ರಮಗಳು

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2019, 11:27 IST
Last Updated 2 ನವೆಂಬರ್ 2019, 11:27 IST

ಚಿಕ್ಕಬಳ್ಳಾಪುರ: ‘ಕಾರ್ತಿಕ ಮಾಸದ ಪ್ರಯುಕ್ತ ಪ್ರತಿ ಸೋಮವಾರದಂದು ವಾಪಸಂದ್ರದ ನಿಡುಮಾಮಿಡಿ ಶಾಖಾ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ನ. 25 ರಂದು ಕಡೆಯ ಸೋಮವಾರ ಸಹಸ್ರ ದೀಪೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ’ ಎಂದು ನಿಡುಮಾಮಿಡಿ ಮಠದ ಆಡಳಿತಾಧಿಕಾರಿ ಶಿವಜ್ಯೋತಿ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತಿ ಸೋಮವಾರದ ಸಂಜೆ 4 ರಿಂದ 6ರ ವರೆಗೆ ದೇವರಿಗೆ ಅಭಿಷೇಕ, ಅಲಂಕಾರ, ಆರತಿ, ಭಜನೆ, ಸಂಗೀತ ಕಾರ್ಯಕ್ರಮಗಳು ನಡೆಯಲಿವೆ. ಜತೆಗೆ ಸಹಸ್ರ ದೀಪೋತ್ಸವದ ದಿನವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನಿಡುಮಾಮಿಡಿ ಪೀಠದ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ ಅವರು ಪ್ರವಚನ ನೀಡಲಿದ್ದಾರೆ’ ಎಂದು ಹೇಳಿದರು.

ಬಲಿಜ ಜಾಗೃತ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಟಿ.ಆರ್.ಕೃಷ್ಣಪ್ಪ , ಮುಖಂಡರಾದ ಪ್ರಭಾವತಿ, ಸುಮಿತ್ರ, ಮಂಜುನಾಥ್ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.