ಗೌರಿಬಿದನೂರು: ನಗರದಲ್ಲಿರುವ ತರಕಾರಿ ಮಾರುಕಟ್ಟೆಗೆ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿಕ್ಕಬಳ್ಳಾಪುರದಲ್ಲಿ ನಡೆದ ಕುಂದು ಕೊರತೆ ಸಭೆಯಲ್ಲಿ ಗೌರಿಬಿದನೂರು ನಗರದ ತರಕಾರಿ, ಹೂ ಹಣ್ಣಿನ ಮಾರುಕಟ್ಟೆ ಸಮಸ್ಯೆಗಳ ಬಗ್ಗೆ ಸುಧಾಕರ್ ಎಂಬುವವರು ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮಾರುಕಟ್ಟೆಯಲ್ಲಿ ಹಲವು ಸಮಸ್ಯೆಗಳು ಕಂಡುಬಂದಿವೆ. ಸರಿಯಾದ ಬೆಳಕಿನ ವ್ಯವಸ್ಥೆ ಇಲ್ಲ, ಶೌಚಾಲಯಗಳ ನಿರ್ವಹಣೆ ಮಾಡಿಲ್ಲ. ಅಲ್ಲಿರುವ ಪರಿಕರ ಹಾಳಾಗಿವೆ. ಮಳೆ ಬಂದರೆ ಮಳೆ ನೀರು ಮಾರುಕಟ್ಟೆ ಒಳಗೆ ಬರುತ್ತವೆ ಇದರಿಂದ ವ್ಯಾಪಾರಿಗಳಿಗೆ ಮತ್ತು ಗ್ರಾಹಕರಿಗೆ ತೊಂದರೆಯಾಗುತ್ತಿದೆ. ಜೊತೆಗೆ ಇಲ್ಲಿ ಕುಡಿಯಲು ನೀರಿನ ವ್ಯವಸ್ಥೆ ಇಲ್ಲ ಎಂದು ದೂರಿದ್ದಾರೆ. ತಕ್ಷಣವೇ ಇಲ್ಲಿ ಬೆಳಕಿನ ವ್ಯವಸ್ಥೆ ಮಾಡಲು ಮತ್ತು ಆರ್‌ಒ ಘಟಕ ಅಳವಡಿಸಲು ಪೌರಾಯುಕ್ತರಿಗೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ನಗರೋತ್ತಾನ 4ರಲ್ಲಿ ಮಾರುಕಟ್ಟೆ ಸುತ್ತ ಇರುವ ಹಳೆ ಕಟ್ಟಡಗಳನ್ನು ಕೆಡವಿ ಸುಸಜ್ಜಿತ ಶೌಚಾಲಯ ಮತ್ತು 200 ವಾಹನ ನಿಲ್ಲುವಂತಹ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಪೌರಾಯುಕ್ತೆ ಡಿ.ಎಂ ಗೀತಾ, ನಗರಸಭೆ ಸಿಬ್ಬಂದಿ, ಮಾರುಕಟ್ಟೆ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.