ADVERTISEMENT

ಪ್ರಧಾನಿಯಾಗಲು ಮೋದಿ ನಾಲಾಯಕ್ಕು, ಕೀಳು ಮಟ್ಟಕ್ಕೆ ಇಳಿದ ದೇವೇಗೌಡ- ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2024, 12:55 IST
Last Updated 21 ಏಪ್ರಿಲ್ 2024, 12:55 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಶಿಡ್ಲಘಟ್ಟ: ‘ದೇವೇಗೌಡರು ಯಾಕೆ ಇಷ್ಟು ಕೀಳುಮಟ್ಟಕ್ಕೆ, ಕೆಳಮಟ್ಟಕ್ಕೆ ಇಳಿದುಬಿಟ್ಟಿದ್ದಾರೆ?  ದೇವೇಗೌಡರೇ ನಿಮ್ಮ ಜಾತ್ಯತೀತತೆ ಏನಾಯಿತು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. 

ನಗರದಲ್ಲಿ ಭಾನುವಾರ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಪರ ರೋಡ್ ಷೋ ನಡೆಸಿ  ಮಾತನಾಡಿದರು. 

ADVERTISEMENT

 ಚಿಕ್ಕಬಳ್ಳಾಪುರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ದೇವೇಗೌಡರು ಪೈಪೋಟಿಗೆ ಬಿದ್ದು ಸುಳ್ಳುಗಳನ್ನು ಹೇಳಿದ್ದಾರೆ. ಕರ್ನಾಟಕಕ್ಕೆ ಖಾಲಿ ಚೊಂಬು ನೀಡಿರುವ ಕೇಂದ್ರ ಸರ್ಕಾರ ಅಕ್ಷಯಪಾತ್ರೆ ನೀಡಿದೆ ಎಂದು ಸುಳ್ಳು ಹೇಳಿದ್ದಾರೆ ಎಂದು ಕಿಡಿಕಾರಿದರು.

ಕೇವಲ ಕುಟುಂಬದ ಸ್ವಾರ್ಥಕ್ಕಾಗಿ ಕೋಮುವಾದಿಗಳೊಂದಿಗೆ ಕೈಜೋಡಿಸಿಬಿಟ್ಟಿರಾ? ನಿಮಗೆ ನಾಚಿಕೆ ಆಗಬೇಕು. ಜೆಡಿಎಸ್‌ನವರಿಗೆ ಕಾಂಗ್ರೆಸ್ ಬಗ್ಗೆ ಹೆದರಿಕೆ ಹುಟ್ಟಿದೆ. ಅದಕ್ಕಾಗಿ ಬಿಜೆಪಿ ಜೊತೆ ಸಖ್ಯ ಬೆಳೆಸಿದ್ದಾರೆ ಎಂದು ಟೀಕಿಸಿದರು.

ದೇವೇಗೌಡರು ಮಗ, ಅಳಿಯ, ಮೊಮ್ಮಗನಿಗೆ ಟಿಕೆಟ್ ಕೊಡಿಸಿ ಕುಟುಂಬಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆ. ಇನ್ನೊಂದು ಅವಕಾಶ ಇದಿದ್ದರೆ ಇನ್ನೊಬ್ಬ ಮೊಮ್ಮಗನಿಗೂ ಸ್ಥಾನ ಕೊಡಿಸುತ್ತಿದ್ದರೇನೋ ಎಂದು ವ್ಯಂಗ್ಯವಾಡಿದರು.

ಪ್ರಧಾನಿಯಾಗಲು ನರೇಂದ್ರ ಮೋದಿ ನಾಲಾಯಕ್ಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.