ಚಿಕ್ಕಬಳ್ಳಾಪುರ: ‘ಎಚ್.ಎನ್ ವ್ಯಾಲಿ ಯೋಜನೆಯಿಂದ ನೀರು ತುಂಬಿರುವ ಕಂದವಾರ ಕೆರೆ ಪರಿಸರದಲ್ಲಿ ನೈಸರ್ಗಿಕ ಸೌಂದರ್ಯ ವೃದ್ಧಿಸಿದ್ದು, ಅಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳ ಮೂಲಕ ಕೆರೆಯನ್ನು ಪ್ರವಾಸಿ ತಾಣವನ್ನಾಗಿಸುವ ಉದ್ದೇಶ ಹೊಂದಲಾಗಿದೆ‘ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಕೆರೆ ಅಭಿವೃದ್ಧಿ ಕುರಿತಂತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
‘ಕಂದವಾರ ಕೆರೆಯನ್ನು ಅಭಿವೃದ್ಧಿಪಡಿಸಿ ಹಿರಿಯ ನಾಗರಿಕರಿಗೆ ವಾಯು ವಿಹಾರ ಪಥ, ಮಕ್ಕಳಿಗೆ ಆಟದ ಮೈದಾನ, ಸಂಗೀತ ಕಾರಂಜಿ, ದೋಣಿ ವಿಹಾರ ನಿರ್ಮಾಣ, ಊಟದ ಕ್ಯಾಂಟೀನ್, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳಲು ಅಧಿಕಾರಿಗಳು ಯೋಜನೆ ರೂಪಿಸಬೇಕು’ ಎಂದು ತಿಳಿಸಿದರು.
ಜಿಲ್ಲಾ ಯೋಜನಾ ನಿರ್ದೇಶಕಿ ರೇಣುಕಾ, ನಗರಸಭೆ ಆಯುಕ್ತ ಲೋಹಿತ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.