ಬಂಧನ
(ಪ್ರಾತಿನಿಧಿಕ ಚಿತ್ರ)
ಚಿಕ್ಕಬಳ್ಳಾಪುರ: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿದ ಆರೋಪದ ಹಿನ್ನೆಲೆಯಲ್ಲಿ ಇಲ್ಲಿನ ನಿವೃತ್ತ ‘ಡಿ’ ಗ್ರೂಪ್ ನೌಕರ ಡಿ.ಶ್ರೀರಾಮಯ್ಯಗೆ ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷಗಳ ಜೈಲು ಶಿಕ್ಷೆ, ₹ 10 ಲಕ್ಷ ದಂಡ ವಿಧಿಸಿದೆ. ₹ 1.35,94,513 ಮೌಲ್ಯದ ಆಸ್ತಿ ಮುಟ್ಟುಗೋಲಿಗೂ ಆದೇಶಿಸಿದೆ.
ಶ್ರೀರಾಮಯ್ಯ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ‘ಡಿ’ ಗ್ರೂಪ್ ನೌಕರರಾಗಿದ್ದರು. ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿದ ಆರೋಪದ ಮೇರೆಗೆ 2014ರಲ್ಲಿ ಅವರ ನಿವಾಸದ ಮೇಲೆ ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು.
ಲೋಕಾಯುಕ್ತ ಡಿವೈಎಸ್‌ಪಿ ಸಿ.ಎನ್.ಬೋಪಯ್ಯ, ಡಿ.ಅಶೋಕ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಗೋವಿಂದರೆಡ್ಡಿ ಲೋಕಾಯುಕ್ತರ ಪರವಾಗಿ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.