ADVERTISEMENT

ಚಿಂತಾಮಣಿ: ಟರ್ಪಾಲಿನ್ ವಿತರಣೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2020, 2:19 IST
Last Updated 29 ನವೆಂಬರ್ 2020, 2:19 IST

ಚಿಂತಾಮಣಿ: ಮುಂಗಾರು ಹಂಗಾಮಿನಡಿರೈತರು ಬೆಳೆದ ಕೃಷಿ ಉತ್ಪನ್ನಗಳ ಒಕ್ಕಣೆ ಮಾಡಲು ರಿಯಾಯಿತಿ ದರದಲ್ಲಿ ಟರ್ಪಾಲಿನ್ ವಿತರಿಸಲು ಡಿ. 1ರಂದು ನಗರಸಭೆ ಸಭಾಂಗಣದಲ್ಲಿ ಬೆಳಿಗ್ಗೆ 11ಗಂಟೆಗೆ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಡಾ.ಎಸ್. ಶ್ರೀನಿವಾಸ್ ತಿಳಿಸಿದ್ದಾರೆ.

ಕೃಷಿ ಉತ್ಪನ್ನಗಳ ಒಕ್ಕಣೆ ಮತ್ತು ಸಂಸ್ಕರಣೆ ಮಾಡಿಕೊಳ್ಳಲು 8*6 ಮೀ ಅಳತೆಯ 250 ಜಿ.ಎಸ್.ಎಂ ಕಪ್ಪುಬಣ್ಣದ ಟರ್ಪಾಲಿನ್‌ಗಳನ್ನು ರಿಯಾಯಿತಿ ದರದಲ್ಲಿ ವಿತರಣೆಗಾಗಿ ತಾಲ್ಲೂಕಿನ ಎಲ್ಲ ರೈತ ಸಂಪರ್ಕ ಕೇಂದ್ರಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ತಾಲ್ಲೂಕಿನ ಹೋಬಳಿಗಳಿಗೆ ನಿಗದಿಪಡಿಸಿದ ಗುರಿ ಅನ್ವಯ ನಿಯಮಾನುಸಾರ ಲಾಟರಿ ನಡೆಸಲಾಗುವುದು. ಅರ್ಜಿ ಸಲ್ಲಿಸಿರುವ ರೈತರು ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT