ADVERTISEMENT

ಮಾ.14ರಂದು ಜಿಲ್ಲಾ ತಂಡದ ಆಯ್ಕೆ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2020, 12:48 IST
Last Updated 9 ಮಾರ್ಚ್ 2020, 12:48 IST

ಚಿಕ್ಕಬಳ್ಳಾಪುರ: ಉಡುಪಿ ಜಿಲ್ಲೆಯ ಅಜ್ಜರಕಾಡಿನಲ್ಲಿ ಮಾರ್ಚ್‌ 20 ರಿಂದ ಎರಡು ದಿನಗಳ ಕಾಲ ನಡೆಯುವ 20 ವರ್ಷ ವಯೋಮಿತಿ ಒಳಗಿನವರ ರಾಜ್ಯಮಟ್ಟದ ಫೆಡೆರೇಷನ್ ಕಪ್ ಕ್ರೀಡಾಕೂಟಕ್ಕೆ ಮಾ.14 ರಂದು ಬೆಳಿಗ್ಗೆ 11 ರಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ತಂಡದ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಇಚ್ಛಿಸುವ 20 ವರ್ಷ ವಯೋಮಿತಿಯಲ್ಲಿರುವ ಬಾಲಕ, ಬಾಲಕಿಯರು ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಜಂಟಿ ಕಾರ್ಯದರ್ಶಿ ಮಂಚನಬಲೆ ಶ್ರೀನಿವಾಸ್ ಅವರನ್ನು 9740615534 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT