ADVERTISEMENT

24ರಂದು ಜಿಲ್ಲಾಮಟ್ಟದ ಯುವ ಜನೋತ್ಸವ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2020, 4:16 IST
Last Updated 20 ಡಿಸೆಂಬರ್ 2020, 4:16 IST

ಚಿಕ್ಕಬಳ್ಳಾಪುರ: ಜಿಲ್ಲಾಮಟ್ಟದ ಯುವಜನೋತ್ಸವ ಆಯ್ಕೆ ಕಾರ್ಯಕ್ರಮವನ್ನು ಡಿ. 24ರಂದು ಬೆಳಿಗ್ಗೆ 10.30ಕ್ಕೆ ಸರ್‌ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

15ರಿಂದ 29ರ ವಯೋಮಿತಿಯಲ್ಲಿರುವ ಜಿಲ್ಲೆಯ ಯುವಕರು, ಸಂಘ–ಸಂಸ್ಥೆಗಳ ಸದಸ್ಯರು, ವಿದ್ಯಾರ್ಥಿಗಳು ಭಾಗವಹಿಸಬಹುದು. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ತಮ್ಮ ವಯಸ್ಸಿನ ದೃಡೀಕರಣ ಪತ್ರ ಹಾಗೂ ಒಂದು ಭಾವಚಿತ್ರದೊಂದಿಗೆ ಭಾಗವಹಿಸಬೇಕು. ಡಿ. 24ರಂದು ಬೆಳಿಗ್ಗೆ 9ರ ಒಳಗಾಗಿ ಕ್ರೀಡಾಂಗಣದಲ್ಲಿ ಇರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.

ಆಯ್ಕೆ ಕಾರ್ಯಕ್ರಮದಲ್ಲಿ ಶಾಸ್ತ್ರೀಯ ಸಂಗೀತ (ಕರ್ನಾಟಕ), ಶಾಸ್ತ್ರೀಯ ಗಾಯನ (ಹಿಂದೂಸ್ಥಾನಿ), ಆಶುಭಾಷಣ, ತಬಲಾ, ಮೃದಗಂ, ಗಿಟಾರ್, ಕೊಳಲು, ಹಾರ್ಮೋನಿಯಂ, ಭರತನಾಟ್ಯ, ಕೂಚುಪುಡಿ, ಕಥಕ್ಕಳಿ, ಜನಪದ ಗೀತೆ, ಏಕಾಂಕ ನಾಟಕ ಹಾಗೂ ಜಾನಪದ ನೃತ್ಯ ಸ್ಪರ್ಧೆಗಳು ನಡೆಯಲಿವೆ.

ADVERTISEMENT

ಸ್ಪರ್ಧಾಳುಗಳಿಗೆ ತಾಲ್ಲೂಕು ಕೇಂದ್ರದಿಂದ ಜಿಲ್ಲಾ ಕೇಂದ್ರದವರಿಗೂ ಹೋಗಿ ಬರುವ ಸಾಮಾನ್ಯ ಬಸ್‌ ದರ ನೀಡಲಾಗುವುದು. ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಗುಂಪು ಮತ್ತು ವೈಯಕ್ತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ, ದ್ವಿತೀಯ ಸ್ಥಾನ ಪಡೆದ ಸ್ಪರ್ಧಾಳುಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ಹಾಗೂ ತೃತೀಯ ಸ್ಥಾನ ಪಡೆದ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ನೀಡಲಾಗುವುದು.

ಜಿಲ್ಲಾ ಮಟ್ಟದಲ್ಲಿ ಗುಂಪು ಹಾಗೂ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ವಿಜೇತರಾದ ಸ್ಪರ್ಧಾಳುಗಳು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಭಾಗವಹಿಸುವ ಸ್ಪರ್ಧಾಳುಗಳಿಗೆ ಇಲಾಖೆಯಿಂದ ಪ್ರಯಾಣ ಭತ್ಯೆ ಮತ್ತು ದಿನಭತ್ಯೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ವಿವರಕ್ಕೆ: 08156-270054.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.