ADVERTISEMENT

ಚೇಳೂರು: ಜೆಜೆಎಂ ಕಾಮಗಾರಿ ವೀಕ್ಷಣೆ, ಅಹವಾಲು ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2024, 14:25 IST
Last Updated 1 ಡಿಸೆಂಬರ್ 2024, 14:25 IST
ಚೇಳೂರು ತಾಲ್ಲೂಕಿನ ಚಾಕವೇಲು ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಿಗೆ ಸಂಸದ ಡಾ.ಕೆ.ಸುಧಾಕರ್  ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು 
ಚೇಳೂರು ತಾಲ್ಲೂಕಿನ ಚಾಕವೇಲು ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಿಗೆ ಸಂಸದ ಡಾ.ಕೆ.ಸುಧಾಕರ್  ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು    

ಚೇಳೂರು: ತಾಲ್ಲೂಕಿನ ಚಾಕವೇಲು ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಿಗೆ ಸಂಸದ ಡಾ.ಕೆ.ಸುಧಾಕರ್ ಭಾನುವಾರ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು. ಸಾರ್ವಜನಿಕರು ವಿವಿಧ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.

ಆದಿರೆಡ್ಡಿಪಲ್ಲಿ, ವಡ್ಡಿವಾಂಡ್ಲಪಲ್ಲಿ, ಯುಗವಪ್ಯಾಯಿಲವಾಂಡ್ಲಪಲ್ಲಿ, ದಿಗವಪ್ಯಾಯಿಲವಾಂಡ್ಲಪಲ್ಲಿ, ಕೊತ್ತೂರು, ವೆಂಟಕರೆಡ್ಡಿಪಲ್ಲಿ, ವೆಂಕಟರೆಡ್ಡಿಪಲ್ಲಿ ತಾಂಡಾ, ಮದ್ದಿರೆಡ್ಡಿಪಲ್ಲಿ, ವೆಂಕಟೇಶಪಲ್ಲಿ, ಬುದ್ದಲವಾರಪಲ್ಲಿ, ಪಾಪಿರೆಡ್ಡಿಪಲ್ಲಿ ಮತ್ತಿತರ ಗ್ರಾಮಗಳಿಗೆ ಭೇಟಿ ನೀಡಿದರು.

ಅಂಗನವಾಡಿ ಕಟ್ಟಡಗಳ ನಿರ್ಮಾಣ, ಗೋಮಾಳ ಅಭಿವೃದ್ಧಿ, ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯ ಬಗ್ಗೆ ಮಾಹಿತಿ ಪಡೆದರು. 

ADVERTISEMENT

‘ಕೇಂದ್ರ ಸರ್ಕಾರ ರೈತರ ಬೆಳೆ ನಷ್ಟ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳುವ ಜೊತೆಗೆ ಅದನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಂತಹ ಮಹತ್ವದ ಯೋಜನೆಯನ್ನು ಜಾರಿ ಮಾಡಿ ಒಂದೂವರೆ ಕೋಟಿ ರೈತರಿಗೆ ₹ 1.5 ಲಕ್ಷ ಕೋಟಿ ಬೆಳೆ ವಿಮೆ ನೀಡಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಪ್ರತಿಯೊಬ್ಬ ಭಾರತೀಯ ಪ್ರಜೆಗೂ ತಲುಪುವಂತೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ. ಆಯುಷ್ಮಾನ್‌ ಭಾರತ್ ಯೋಜನೆಯ ಮೂಲಕ ಬಡವರ ಆರೋಗ್ಯ ಸಮಸ್ಯೆಗಳು, ಚಿಕಿತ್ಸೆ, ಶಸ್ತ್ರಚಿಕಿತ್ಸೆಗಳಿಗಾಗಿ ಒಬ್ಬ ವ್ಯಕ್ತಿಗೆ ಪ್ರತಿ ವರ್ಷ ₹ 5 ಲಕ್ಷ ವೆಚ್ಚ ಭರಿಸುತ್ತಿದೆ. ಇದರಿಂದ ಬಡವರು,ಮಧ್ಯಮ ವರ್ಗದವರಿಗೆ ಅನುಕೂಲವಾಗಿದೆ ಎಂದು ಹೇಳಿದರು.

ಅತಿ ಕಡಿಮೆ ದರದಲ್ಲಿ ಗುಣಮಟ್ಟದ ಔಷಧಗಳನ್ನು ಒದಗಿಸುವ ಜನೌಷಧಿ ಕೇಂದ್ರಗಳನ್ನು ದೇಶಾದ್ಯಂತ ತೆರೆಯಲಾಗಿದೆ. ಸ್ವಚ್ಛ ಭಾರತ್ ಯೋಜನೆಯಡಿ ವೈಯಕ್ತಿಕ ಶೌಚಾಲಗಳನ್ನು ನಿರ್ಮಿಸಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಬಡವರು, ಮಧ್ಯಮವರ್ಗದ ಜನರ ಆರೋಗ್ಯ ಮತ್ತು ಸ್ವಾಭಿಮಾನ ಕಾಪಾಡುತ್ತಿದೆ ಎಂದು ಹೇಳಿದರು.

ಹವಾಮಾನ ವೈಪರೀತ್ಯದಿಂದಾ ರೈತರಿಗೆ ಬೆಳೆ ನಷ್ಟದಿಂದಾಗುವ ಆರ್ಥಿಕ ಹೊರೆ ತಪ್ಪಿಸಲು ಫಸಲ್ ಬಿಮಾ ಯೋಜನೆ ಜಾರಿ ಮಾಡಿದೆ. ಈ ಯೋಜನೆಯ ಮೂಲಕ ದೇಶದ ಒಂದೂವರೆ ಕೋಟಿ ರೈತರಿಗೆ ₹ 1.5 ಲಕ್ಷ ಕೋಟಿ ರೂಪಾಯಿಗಳನ್ನು ಬೆಳೆ ವಿಮೆ ಪರಿಹಾರವಾಗಿ ನೀಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಲು ಅಧಿಕಾರಿಗಳು ಮತ್ತು ಗ್ರಾಮಗಳ ಮುಖಂಡರು ಮುಂದಾಗಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹರಿನಾಥರೆಡ್ಡಿ, ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಕೋನಪ್ಪರೆಡ್ಡಿ, ಬಿಜೆಪಿ, ಜೆಡಿಎಸ್ ಮುಖಂಡರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.