ADVERTISEMENT

ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2019, 16:27 IST
Last Updated 24 ಡಿಸೆಂಬರ್ 2019, 16:27 IST
ಛಾಯಾಚಿತ್ರ ಪ್ರದರ್ಶನವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್.ಲತಾ, ಸಿಇಒ ಬಿ.ಫೌಜಿಯಾ ತರನ್ನುಮ್ ವೀಕ್ಷಿಸಿದರು.
ಛಾಯಾಚಿತ್ರ ಪ್ರದರ್ಶನವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್.ಲತಾ, ಸಿಇಒ ಬಿ.ಫೌಜಿಯಾ ತರನ್ನುಮ್ ವೀಕ್ಷಿಸಿದರು.   

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ 100 ದಿನಗಳ ಆಡಳಿತ ಪೂರೈಸಿದ ಪ್ರಯುಕ್ತ ವಾರ್ತಾ ಇಲಾಖೆ ವತಿಯಿಂದ ಸರ್ಕಾರ ಕೈಗೊಂಡ ವಿವಿಧ ಜನಪರ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ನೆರೆ ಪ್ರವಾಹದ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಮಂಗಳವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.

ಛಾಯಾಚಿತ್ರ ಪ್ರದರ್ಶನವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್.ಲತಾ, ಸಿಇಒ ಬಿ.ಫೌಜಿಯಾ ತರನ್ನುಮ್, ಕೆಎಸ್‌ಆರ್‌ಟಿಸಿ ಅಧಿಕಾರಿಗಳಾದ ಬಸವರಾಜು, ಮಂಜುನಾಥ್, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT