ADVERTISEMENT

ಸುಧಾಕರ್ ಹೆಸರು ಬರೆದಿಟ್ಟು ಜಿ.ಪಂ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2025, 5:33 IST
Last Updated 7 ಆಗಸ್ಟ್ 2025, 5:33 IST
<div class="paragraphs"><p>ಬಾಬು</p></div>

ಬಾಬು

   

ಚಿಕ್ಕಬಳ್ಳಾಪುರ: ಇಲ್ಲಿನ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ ಬಾಬು (33) ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಾಬು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ADVERTISEMENT

ಆತ್ಮಹತ್ಯೆಗೆ ಸಂಸದ ಡಾ.ಕೆ.ಸುಧಾಕರ್, ಅವರ ಬೆಂಬಲಿಗರಾದ ನಾಗೇಶ್ ಎನ್. ಮತ್ತು ಮಂಜುನಾಥ್ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ.

'ಸುಧಾಕರ್ ಸಚಿವರಾಗಿದ್ದ ವೇಳೆ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ಕಾಯಂ ಸರ್ಕಾರಿ ಕೆಲಸ ಕೊಡಿಸುತ್ತೇವೆ ಎಂದಿದ್ದರು. ₹40 ಲಕ್ಷ ನೀಡಬೇಕು ಎಂದಿದ್ದರು. ನಾನು ನನ್ನ ಬಳಿ ಇದ್ದ ಹಣದ ಜೊತೆಗೆ ಸಾಲ ಮಾಡಿ ₹25 ಲಕ್ಷ ನೀಡಿದ್ದೆ. ಆದರೆ ಕೆಲಸ ಮಾತ್ರ ಕೊಡಿಸಲಿಲ್ಲ' ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.

ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.