ADVERTISEMENT

ಪ್ರಗತಿಗೆ ಶಿಕ್ಷಣ ಪೂರಕ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2020, 5:03 IST
Last Updated 16 ನವೆಂಬರ್ 2020, 5:03 IST
ಚಿಂತಾಮಣಿ ತಾಲ್ಲೂಕಿನ ರಾಗುಟ್ಟಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್. ನೋಮೇಶಕುಮಾರ್ ಉದ್ಘಾಟಿಸಿದರು
ಚಿಂತಾಮಣಿ ತಾಲ್ಲೂಕಿನ ರಾಗುಟ್ಟಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್. ನೋಮೇಶಕುಮಾರ್ ಉದ್ಘಾಟಿಸಿದರು   

ಚಿಂತಾಮಣಿ: ‘ಪ್ರತಿಯೊಬ್ಬ ಮಗುವೂ ವಿದ್ಯಾಭ್ಯಾಸ ಪಡೆದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್. ನೋಮೇಶಕುಮಾರ್ ಹೇಳಿದರು.

ತಾಲ್ಲೂಕಿನ ರಾಗುಟ್ಟಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಶನಿವಾರ ನಡೆದ ಮಕ್ಕಳ ಹಕ್ಕುಗಳ ಗ್ರಾಮ ಸಭೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಕೊಡಿಸುವುದು ಪೋಷಕ ಜವಾಬ್ದಾರಿ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು, ಕ್ರೀಡಾ ಚಟುವಟಿಕೆಗಳು ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳು ದೊರೆಯುತ್ತವೆ. ಉಚಿತ ಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ, ವಿದ್ಯಾರ್ಥಿ ವೇತನ ಮತ್ತಿತರ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ. ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ಮನವಿ ಮಾಡಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಂಜುನಾಥ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಕೇವಲ ಅಂಕಗಳಿಗೆ ಮಾತ್ರ ಸೀಮಿತರಾಗುವುದಿಲ್ಲ. ಅಂಕಗಳ ಜತೆಗೆ ಉತ್ತಮ ಜ್ಞಾನ, ಸಂಸ್ಕೃತಿ, ನಡುವಳಿಕೆಯನ್ನು ಕಲಿಯುತ್ತಾರೆ ಎಂದರು.

ಮಕ್ಕಳಿಗೆ ಸಿಗಬೇಕಾದ ಹಕ್ಕುಗಳನ್ನು ಕಡ್ಡಾಯವಾಗಿ ನೀಡುವ ಮೂಲಕ ಅವರ ಭವಿಷ್ಯವನ್ನು ಉತ್ತಮಪಡಿಸುವ ಜವಾಬ್ದಾರಿ ಪೋಷಕರು, ಶಿಕ್ಷಕರು ಹಾಗೂ ಸರ್ಕಾರದ ಮೇಲಿದೆ. ಪ್ರತಿಯೊಂದು ಮಗು ಆದರ್ಶ ವ್ಯಕ್ತಿಯಾದರೆ ಸಮಾಜ ಉತ್ತಮವಾಗಿರುತ್ತದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಬ್ರಮಣಿ, ನರೇಗಾ ಎಂಜಿನಿಯರ್ ಅರುಣ್, ತಾಂತ್ರಿಕ ವಿಭಾಗದ ಬಿ.ಎಸ್. ಅರುಣ್, ನಾರಾಯಣಸ್ವಾಮಿ, ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.