ADVERTISEMENT

ಗುಡಿಬಂಡೆ ತಾಲ್ಲೂಕು ವಕೀಲರ ಸಂಘಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2025, 14:15 IST
Last Updated 27 ಜನವರಿ 2025, 14:15 IST
ಗುಡಿಬಂಡೆ ತಾಲ್ಲೂಕು ವಕೀಲರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಟಿ.ಸಿ.ಅಶ್ವತ್ತರೆಡ್ಡಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು
ಗುಡಿಬಂಡೆ ತಾಲ್ಲೂಕು ವಕೀಲರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಟಿ.ಸಿ.ಅಶ್ವತ್ತರೆಡ್ಡಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು   

ಗುಡಿಬಂಡೆ: ತಾಲ್ಲೂಕು ವಕೀಲರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಟಿ.ಸಿ.ಅಶ್ವತ್ತರೆಡ್ಡಿ 17 ಮತ ಪಡೆಯುವ ಮೂಲಕ ತಾಲ್ಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ಇನ್ನು ಕಾರ್ಯದರ್ಶಿಯಾಗಿ ಸಿ.ವಿ.ಮಂಜುನಾಥ್ 17 ಮತಗಳನ್ನು ಪಡೆದರು. ಕೆ.ಆರ್.ಮಂಜುನಾಥ್ ಉಪಾಧ್ಯಕ್ಷರಾಗಿ, ಎನ್.ಬಾಬು ಖಜಾಂಚಿಯಾಗಿ ಹಾಗೂ ಜಂಟಿ ಕಾರ್ಯದರ್ಶಿಯಾಗಿ ಮಹೇಶ್  ಅವಿರೋಧವಾಗಿ ಆಯ್ಕೆಯಾದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಮತದಾನ ನಡೆಯಿತು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಟಿ.ಸಿ.ಅಶ್ವತ್ಥರೆಡ್ಡಿ ಮಾತನಾಡಿ, ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT