ADVERTISEMENT

ನ್ಯಾಯಸಮ್ಮತವಾಗಿ ಹಕ್ಕು ಚಲಾಯಿಸಿ

ಕಾಲ್ನಡಿಗೆ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಬಿ. ಫೌಜಿಯಾ ತರನ್ನುಮ್‌ ಚಾಲನೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2019, 5:45 IST
Last Updated 26 ನವೆಂಬರ್ 2019, 5:45 IST
ಜಾಥಾದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು
ಜಾಥಾದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು   

ಚಿಕ್ಕಬಳ್ಳಾಪುರ: ಮತದಾರರು ಯಾವುದೇ ಆಸೆ–ಆಮಿಷಗಳಿಗೆ ಒಳಗಾಗದೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಬಿ.ಫೌಜಿಯಾ ತರನ್ನುಮ್ ಹೇಳಿದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕು ಸ್ವೀಪ್ ಸಮಿತಿಯಿಂದ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಾಗೃತಿಗಾಗಿ ಸೋಮವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಿಂದ ಎಂ.ಜಿ.ರಸ್ತೆ ಮುಖಾಂತರವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದವರೆಗೂ ಕಾಲ್ನಡಿಗೆ ಜಾಥಾ ನಡೆಯಿತು.

ADVERTISEMENT

ಮತದಾನದಿಂದ ಯಾರೊಬ್ಬರು ಹೊರಗುಳಿಯಬಾರದು. ಯಾವುದೇ ರಾಜಕೀಯ ಪಕ್ಷಗಳು ತೋರಿಸುವ ಆಸೆ– ಆಮಿಷಗಳಿಗೆ ಒಳಗಾಗಬಾರದು. ಮುಕ್ತವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು. ಮುಕ್ತವಾಗಿ ಮತದಾನ ಮಾಡುವುದರಿಂದ ಒಳ್ಳೆಯ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತದೆ. ಒಳ್ಳೆಯ ನಾಯಕನ ಆಡಳಿತದಿಂದ ಜಿಲ್ಲೆಗೆ ಮತ್ತಷ್ಟು ಅಭಿವೃದ್ಧಿಯ ಕಾಮಗಾರಿಗಳು ಬರಲಿದೆ ಎಂದರು.

ಮತದಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿದವರು ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಿ ಮತದಾರರಲ್ಲಿ ಕಡ್ಡಾಯ ಹಾಗೂ ನೈತಿಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು. ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹರ್ಷವರ್ಧನ್, ನಗರಸಭೆ ಆಯುಕ್ತ ಲೋಹಿತ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.