ADVERTISEMENT

ಶಿಡ್ಲಘಟ್ಟ: ಎಲ್‌ಐಸಿ ಆಧಾರಿತ ಪಿಂಚಣಿ ನೀಡಿ; ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 4:02 IST
Last Updated 10 ಆಗಸ್ಟ್ 2021, 4:02 IST
ಶಿಡ್ಲಘಟ್ಟದ ತಾಲ್ಲೂಕು ಕಚೇರಿಯ ಮುಂದೆ ಸಿಐಟಿಯು ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿರಸ್ತೆದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು
ಶಿಡ್ಲಘಟ್ಟದ ತಾಲ್ಲೂಕು ಕಚೇರಿಯ ಮುಂದೆ ಸಿಐಟಿಯು ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿರಸ್ತೆದಾರ್ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು   

ಶಿಡ್ಲಘಟ್ಟ: ಅಂಗನವಾಡಿ, ಗ್ರಾಮ ಪಂಚಾಯಿತಿ, ಬಿಸಿಯೂಟ ಹಾಗೂ ಹಾಸ್ಟೆಲ್ ನೌಕರರ ಸಂಘಟನೆಗಳ ಸದಸ್ಯರು ಸಿಐಟಿಯು ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ತಾಲ್ಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿ ಸಿಬ್ಬಂದಿಗೆ 15 ತಿಂಗಳಿಂದ ವೇತನ ನೀಡಿಲ್ಲ. ಜೇಷ್ಟತಾ ಪಟ್ಟಿ ಬಿಡುಗಡೆ ಮಾಡಬೇಕು. ಅಕ್ಷರ ದಾಸೋಹ ನೌಕರರಿಗೆ ಏಪ್ರಿಲ್ ತಿಂಗಳಿನಿಂದ ವೇತನ ನೀಡಬೇಕು. ಅಂಗನವಾಡಿ ಹಾಗೂ ಹಾಸ್ಟೆಲ್ ನೌಕರರನ್ನು 3 ಮತ್ತು 4ನೇ ದರ್ಜೆ ನೌಕರರನ್ನಾಗಿ ಪರಿಗಣಿಸಿ, ₹18 ಸಾವಿರ ವೇತನ ನೀಡಬೇಕು. ಎಲ್‌ಐಸಿ ಆಧಾರಿತ ಪಿಂಚಣಿ ನೀಡಬೇಕು ಎಂದು ತಾಲ್ಲೂಕು ಆಡಳಿತಕ್ಕೆ ಮನವಿ ಮಾಡಲಾಯಿತು.

ಸಿಐಟಿಯು ತಾಲ್ಲೂಕು ಅಧ್ಯಕ್ಷ ಸುದರ್ಶನ್, ಬಿಸಿಯೂಟ ನೌಕರರ ಅಧ್ಯಕ್ಷೆ ಮುನಿಲಕ್ಷ್ಮಮ್ಮ, ಅಂಗನವಾಡಿ ನೌಕರರ ಸಂಘದ ಬೈರಗಾನಹಳ್ಳಿ ಮಂಜುಳಾ, ಸುನಂದಮ್ಮ, ಹಾಸ್ಟೆಲ್ ನೌಕರರ ಸಂಘದ ಆಂಜನೇಯರೆಡ್ಡಿ, ಭಾಗ್ಯಮ್ಮ, ವಿಜಯಮ್ಮ, ಗಾಯಿತ್ರಿ, ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಸುದರ್ಶನ್ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.