ADVERTISEMENT

ಪ್ರಬಂಧ ಸ್ಪರ್ಧೆ: ರಾಜ್ಯಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2021, 2:13 IST
Last Updated 26 ನವೆಂಬರ್ 2021, 2:13 IST
ಚುನಾವಣಾ ಆಯೋಗ ನಡೆಸಿದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುವ ಚಿಂತಾಮಣಿಯ ಆರ್.ಕೆ. ವಿಜನ್ ಕಾಲೇಜಿನ ವಿದ್ಯಾರ್ಥಿನಿ ಬಿ. ಕುಸುಮಾ ಗೌಡ ಅವರನ್ನು ಪ್ರಾಂಶುಪಾಲ ಕೆ.ಪಿ. ನಾಗಾರ್ಜುನರೆಡ್ಡಿ, ನಿರ್ದೇಶಕ ಡಾ.ಜಿ.ವಿ.ಕೆ. ರೆಡ್ಡಿ ಅಭಿನಂದಿಸಿದರು

ಚಿಂತಾಮಣಿ: ಕೇಂದ್ರ ಚುನಾವಣಾ ಆಯೋಗ ಯುವ ಮತದಾರರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಡೆಸುವ ಪ್ರಬಂಧ ಸ್ಪರ್ಧೆಯಲ್ಲಿ ನಗರದ ಆರ್.ಕೆ. ವಿಜನ್ ಕಾಲೇಜಿನ ವಿದ್ಯಾರ್ಥಿನಿ ಬಿ. ಕುಸುಮಾ ಗೌಡ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೇತೃತ್ವದಲ್ಲಿ ಈಚೆಗೆ ನಡೆದ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಅವರು ಪ್ರಶಸ್ತಿಗಳಿಸಿದ್ದಾರೆ.

ನಗರದ ಆರ್. ವಿಜನ್ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಬಿ. ಕುಸುಮಾ ಗೌಡ ಆಂಗ್ಲ ಮಾಧ್ಯಮ ವಿಭಾಗದಲ್ಲಿ ‘ಮತದಾನದಿಂದ ಪ್ರಜಾಪ್ರಭುತ್ವದಲ್ಲಿ ಬದಲಾವಣೆ ಸಾಧ್ಯ’ ಎಂಬ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.