ADVERTISEMENT

ಚಿಕ್ಕಬಳ್ಳಾಪುರ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 4:25 IST
Last Updated 10 ನವೆಂಬರ್ 2020, 4:25 IST

ಚಿಂತಾಮಣಿ: ಕೃಷಿ ಇಲಾಖೆಯಿಂದ ನೀಡುವ ಟಾರ್ಫಾಲಿನ್‌ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ನ. 17ರವರೆಗೆ ವಿಸ್ತರಿಸಲಾಗಿದೆ.

ರೈತರು ಮುಂಗಾರು ಹಂಗಾಮಿನಡಿ ಬೆಳೆದ ಕೃಷಿ ಉತ್ಪನ್ನಗಳನ್ನು ಒಕ್ಕಣೆ ಮತ್ತು ಸಂಸ್ಕರಣೆ ಮಾಡಿಕೊಳ್ಳಲು ಕೃಷಿ ಇಲಾಖೆಯು 8*6 ಅಳತೆಯ 250 ಜಿಎಸ್ಎಂ ಕಪ್ಪಬಣ್ಣದ ಟಾರ್ಪಾಲಿನ್‌ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಿದೆ. ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಎಲ್ಲ ವರ್ಗದ ಆಸಕ್ತ ರೈತರು ಅರ್ಜಿ ಸಲ್ಲಿಸಬಹುದು.

ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಕಾರ್ಡ್‌ ಜೆರಾಕ್ಸ್ ಪ್ರತಿ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಸಂಬಂಧಿಸಿದ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಅರ್ಜಿ ಸಲ್ಲಿಸಬೇಕು.

ADVERTISEMENT

ತಾಲ್ಲೂಕು ಹಾಗೂ ಹೋಬಳಿಗೆ ನೀಡಿದ ಗುರಿಯಂತೆ ಜನಪ್ರತಿನಿಧಿಗಳು ಹಾಗೂ ರೈತರ ಸಮ್ಮುಖದಲ್ಲಿ ಲಾಟರಿ ಮೂಲಕ ಫಲಾನುಭವಿಗಳ ಆಯ್ಕೆ ನಡೆಯಲಿದೆ. ಲಾಟರಿ ದಿನಾಂಕವನ್ನು ಪ್ರಕಟಣೆ ಮೂಲಕ ತಿಳಿಸಲಾಗುತ್ತದೆ. ಕೃಷಿ ಇಲಾಖೆಯಿಂದ ಈಗಾಗಲೇ ಟಾರ್ಪಾಲಿನ್ ಪಡೆದಿರುವ ರೈತರ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.