ADVERTISEMENT

ಚಿಕ್ಕಬಳ್ಳಾ‍‍ಪುರ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 30 ಮೇ 2023, 13:08 IST
Last Updated 30 ಮೇ 2023, 13:08 IST
   

ಚಿಂತಾಮಣಿ: ರಾಜ್ಯ ಸರ್ಕಾರಿ ನೌಕರರ ಮಕ್ಕಳು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜೂನ್ 10 ರವರೆಗೆ ವಿಸ್ತರಿಸಲಾಗಿದೆ.

2022-23 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಮೇ 31 ಕ್ಕೆ ನಗದಿಯಾಗಿದ್ದ ಕೊನೆಯ ದಿನಾಂಕವನ್ನು ನೌಕರರ ಕೋರಿಕೆ ಮೇರೆಗೆ ಜೂನ್ 10 ರವರೆಗೆ ವಿಸ್ತರಿಸಲಾಗಿದೆ.

ವಿದ್ಯಾರ್ಥಿಯ ತಂದೆ ಅಥವಾ ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ನೌಕರರಾಗಿರಬೇಕು. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿಯ ವಿದ್ಯಾಸಂಸ್ಥೆಗಳಲ್ಲಿ ನೌಕರರಾಗಿರುವ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ. ಮಕ್ಕಳು 2023 ನೇ ಮಾರ್ಚಿ/ಏಪ್ರಿಲ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ತೇರ್ಗಡೆಯಾಗಿರಬೇಕು.

ADVERTISEMENT

ಅರ್ಜಿಯೊಂದಿಗೆ ದೃಢೀಕೃತ ಅಂಕಪಟ್ಟಿ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ನೌಕರರ ಇಲಾಖೆಯ ಸೇವಾ ದೃಢೀಕರಣ ಪತ್ರ, ಸಂಘದ ತಾಲ್ಲೂಕು ಅಥವಾ ಜಿಲ್ಲಾ ಘಟಕದ ಸದಸ್ಯರಿಂದ ಪಡೆದ ದೃಢೀಕರಣ ಪತ್ರವನ್ನು ಲಗತ್ತಿಸಿ ಅಪ್ ಲೋಡ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ 9902135813, 080-22354784 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.