ಶಿಡ್ಲಘಟ್ಟ: ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಗುಡ್ಲನರಸಿಂಹನಹಳ್ಳಿಯಲ್ಲಿ ಪರವಾನಗಿ ಇಲ್ಲದೆ ಗಾಂಜಾ ಬೆಳೆದಿದ್ದ ರೈತನನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಗುಡ್ಲನರಸಿಂಹನಹಳ್ಳಿ ರೈತ ನರಸೇಗೌಡ ಬಂಧಿತರು.
ತೋಟದಲ್ಲಿ ಗಾಂಜಾ ಬೆಳೆದಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಹತ್ತು ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಮುರಳೀಧರ್, ಎಸ್.ಐ ಸತೀಶ್, ಪೇದೆಗಳಾದ ಸುಧಾಕರ್, ವೆಂಕಟೇಶ್, ಕಂದಾಯ ಇಲಾಖೆಯ ಶಿಶಧರ್, ಯಶಸ್ವಿನಿ ಭಾಗವಹಿಸಿದ್ದರು.
ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.