ADVERTISEMENT

ರೇಣುಕಾಚಾರ್ಯ ವಿರುದ್ಧ ರೈತ ಸಂಘದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2020, 3:54 IST
Last Updated 20 ಡಿಸೆಂಬರ್ 2020, 3:54 IST
ಶಿಡ್ಲಘಟ್ಟದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಪ್ರತಿಭಟಿಸಿದರು
ಶಿಡ್ಲಘಟ್ಟದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಪ್ರತಿಭಟಿಸಿದರು   

ಶಿಡ್ಲಘಟ್ಟ: ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರ ಮೇಲೆ ಇಲ್ಲಸಲ್ಲದ ಆಪಾದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ನಗರದ ಬಸ್ ನಿಲ್ದಾಣದ ಬಳಿ ಶನಿವಾರ ಮಾನವ ಸರಪಣಿ ನಿರ್ಮಿಸಿ ಪ್ರತಿಭಟಿಸಿದರು.

ರೇಣುಕಾಚಾರ್ಯ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಮಾತನಾಡಿ, ‘ವಿನಾಕಾರಣ ರೈತರ ಬಗ್ಗೆ ಕೀಳುಮಟ್ಟದ ಪದಗಳನ್ನು ಬಳಸುವ ರೇಣುಕಾಚಾರ್ಯ ಅವರನ್ನು ಮುಖ್ಯಮಂತ್ರಿ ಅವರು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ವೇಣು, ಮುನಿನಂಜಪ್ಪ, ಅಶ್ವತ್ಥನಾರಾಯಣ, ಬಿ. ನಾರಾಯಣಸ್ವಾಮಿ, ಕೆಂಪಣ್ಣ, ದೇವರಾಜ್, ರಮೇಶ್, ರಾಮಕೃಷ್ಣಪ್ಪ, ಸುಬ್ರಮಣಿ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.