ADVERTISEMENT

ಸ್ವಂತ ಖರ್ಚಿನಲ್ಲಿ ಧ್ವಜ ಸ್ತಂಭ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2022, 3:45 IST
Last Updated 5 ಆಗಸ್ಟ್ 2022, 3:45 IST
ಶಿಡ್ಲಘಟ್ಟದ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಕೆ.ಸತೀಶ್ ಧ್ವಜ ಸ್ತಂಭ ನಿರ್ಮಿಸಲು ಗುದ್ದಲಿ ಪೂಜೆ ನೆರವೇರಿಸಿದರು
ಶಿಡ್ಲಘಟ್ಟದ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಕೆ.ಸತೀಶ್ ಧ್ವಜ ಸ್ತಂಭ ನಿರ್ಮಿಸಲು ಗುದ್ದಲಿ ಪೂಜೆ ನೆರವೇರಿಸಿದರು   

ಶಿಡ್ಲಘಟ್ಟ: ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹಾನ್ ವ್ಯಕ್ತಿಗಳು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಲಭಿಸಿರುವ ಸ್ವಾತಂತ್ರ್ಯವನ್ನು ದೇಶದ ಅಭ್ಯುದಯಕ್ಕೆ ಬಳಸಿಕೊಂಡು ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಬೇಕೆಂದು ಶಿಡ್ಲಘಟ್ಟ ಗ್ರಾಮಾಂತರ ಪೋಲಿಸ್ ಠಾಣೆಯ ಪಿಎಸ್ಐ ಕೆ.ಸತೀಶ್ ತಿಳಿಸಿದರು.

ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಧ್ವಜ ಸ್ತಂಭ ನಿರ್ಮಿಸಲು ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮದಲ್ಲಿ ಹರ್ ಘರ್ ತಿರಂಗ ಅಭಿಯಾನ ನಡೆಸುತ್ತಿದ್ದು, ಇದರಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಎಂದರು. ಸಹ ಶಿಕ್ಷಕಿ ಸೈಯೀದಾ ಇಷರತ್, ಜಮೀಲಾ, ಸಿ.ಎಲ್.ಸತೀಶ್, ಗೋಪಾಲಕೃಷ್ಣ, ಅನ್ನಪೂರ್ಣ ಹಿರೇಮಠ, ಆರ್.ಮಧುಸುಧನ್ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.