ADVERTISEMENT

ಮೂಲೆ ಗುಂಪಾಗುತ್ತಿರುವ ಜನಪದ ಕಲೆ

ಗುರು ಶಿಷ್ಯ ಪರಂಪರೆ ಕಾರ್ಯಕ್ರಮಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2019, 19:45 IST
Last Updated 11 ಸೆಪ್ಟೆಂಬರ್ 2019, 19:45 IST
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಸ್.ವೆಂಕಟಾಚಲಪತಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಸ್.ವೆಂಕಟಾಚಲಪತಿ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಸನಾತನ ಕಾಲದಿಂದಲೂ ಜಾನಪದ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗಿರಿಜನರು ಅಪಾರ ಶ್ರಮ ವಹಿಸುತ್ತಿದ್ದರು. ಆದರೆ ಬದಲಾದ ಕಾಲಘಟ್ಟದಲ್ಲಿ ನಮ್ಮ ಜನಪದ ಕಲೆಗಳು ಮೂಲೆಗುಂಪಾಗುತ್ತಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಸ್.ವೆಂಕಟಾಚಲಪತಿ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಶ್ವಂತ್ ಅಕಾಡೆಮಿ ಆಫ್ ಕಲ್ಚರಲ್ ಫಿಲಂ ಸೈನ್ಸ್‍ಸ್ ಅಂಡ್ ರೀಸರ್ಚ್ ಇನ್ಸಿಟಿಟ್ಯೂಟ್, ಯಶ್ವಂತ್ ಸ್ಕೂಲ್ ಆಫ್ ಡ್ಯಾನ್ಸ್ ವಯಿಯಿಂದ ಜಚನಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗುರು ಶಿಷ್ಯ ಪರಂಪರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬಡ ವಿದ್ಯಾರ್ಥಿಗಳಿಗೆ ನಮ್ಮ ಇಲಾಖೆ ವತಿಯಿಂದ ಉಚಿತ ತರಬೇತಿಯನ್ನು ನೀಡಿ ಜಾನಪದ ಪ್ರಕಾರಗಳಿಗೆ ಪ್ರೋತ್ಸಾಹವನ್ನು ನೀಡುವ ಉದ್ದೇಶದಿಂದ ಗುರು ಶಿಷ್ಯ ಪರಂಪರೆ ಕಾರ್ಯಕ್ರಮ ರೂಪಿಸಲಾಗಿದೆ. ಯುವಜನರು ಇದರ ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

ಜಚನಿ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ಶಿವಜ್ಯೋತಿ, ಯಶ್ವಂತ್ ಅಕಾಡೆಮಿ ಆಫ್ ಕಲ್ಚರಲ್ ಅಕಾಡೆಮಿ ಅಧ್ಯಕ್ಷ ಎಂ.ಶ್ರೀನಿವಾಸ್, ಹಿರಿಯ ಸಾಹಿತಿಗಳಾದ ಸುಲ್ತಾನ್ ಪೇಟೆ ವೆಂಕಟರಾಜು, ಸರಸಮ್ಮ, ಶ್ರೀನಿವಾಸ್, ಕಾಲೇಜಿನ ಪ್ರಾಂಶುಪಾಲ ಮುನಿಸ್ವಾಮಿ, ಮಾನವ ಹಕ್ಕುಗಳ ಜಾಗೃತಿ ಸಮಿತಿ ಜಿಲ್ಲಾ ಘಟಕ ಉಪಾಧ್ಯಕ್ಷ ವೇಣು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.