ಚಿಕ್ಕಬಳ್ಳಾಪುರ: ನಗರದ ಹೊರವಲಯದ ಸೂಲಾಲಪ್ಪನದಿನ್ನೆಯ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನದಲ್ಲಿ ಗುರುವಾರ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ನಡೆಯಿತು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ವನ್ಯ ಸಂಪತ್ತು ನಾಡಿನ ಪ್ರಮುಖ ಸಂಪತ್ತಾಗಿದೆ. ಕಾಡು ಇದ್ದರೆ ಮಾತ್ರ ಜೀವ ಸಂಕುಲ ಸಮೃದ್ಧವಾಗಿರಲು ಸಾಧ್ಯ. ಅರಣ್ಯ, ಅಲ್ಲಿನ ವನ್ಯಜೀವಿ ಸಂಕುಲವನ್ನು ಕಾಪಾಡಬೇಕಾದುದು ನಮ್ಮ ಎಲ್ಲ ಎಲ್ಲರ ಕರ್ತವ್ಯ ಎಂದು ಹೇಳಿದರು.
ಅರಣ್ಯ ಇಲಾಖೆಯ ಸಿಬ್ಬಂದಿಯ ಕರ್ತವ್ಯ ಸಂದರ್ಭದಲ್ಲಿ ಅವಘಡದಿಂದ ಪ್ರಾಣಕಳೆದುಕೊಂಡ ನಿದರ್ಶನವಿದೆ. ಕಾಡು ಪ್ರಾಣಿಗಳ ದಾಳಿಗೂ ತುತ್ತಾಗಿದ್ದಾರೆ. ಅರಣ್ಯ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎಂದರು.
ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ಸಿ.ಎಚ್., ಹುತಾತ್ಮ ದಿನದ ಮಹತ್ವದ ಬಗ್ಗೆ ವಿವರಿಸಿದರು. ರಾಜ್ಯದಲ್ಲಿ ಹುತಾತ್ಮರಾದ 62 ಮಂದಿಯ ಹೆಸರು ಓದಿ ಗೌರವ ಸಲ್ಲಿಸಲಾಯಿತು.
ಅರಣ್ಯ ಇಲಾಖೆಯ ಕವಾಯತು ತಂಡ ಹಾಗೂ ಜಿಲ್ಲಾ ಪೊಲೀಸ್ ವಾದ್ಯ ವೃಂದದಿಂದ ಹುತಾತ್ಮರಿಗೆ ಗೌರವ ಸಲ್ಲಿಸಲಾಯಿತು. ಮೌನಾಚರಣೆ ನಡೆಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಸಾಮಾಜಿಕ ಅರಣ್ಯ ವಿಭಾಗದ ಡಿಎಫ್‌ಒ ಗೀತಾ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.