ADVERTISEMENT

ಉಚಿತ ಯೋಗಾಸನ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2020, 4:56 IST
Last Updated 16 ನವೆಂಬರ್ 2020, 4:56 IST
ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಪಂಚಾಯಿತಿಯ ಗ್ರಂಥಾಲಯದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಓದುವ ಬೆಳಕು ಕಾರ್ಯಕ್ರಮದಡಿ ವಿದ್ಯಾರ್ಥಿಗಳನ್ನು ನೋಂದಾಯಿಸಿ ಪುಸ್ತಕ ವಿತರಿಸಲಾಯಿತು
ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಪಂಚಾಯಿತಿಯ ಗ್ರಂಥಾಲಯದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಓದುವ ಬೆಳಕು ಕಾರ್ಯಕ್ರಮದಡಿ ವಿದ್ಯಾರ್ಥಿಗಳನ್ನು ನೋಂದಾಯಿಸಿ ಪುಸ್ತಕ ವಿತರಿಸಲಾಯಿತು   

ಚಿಂತಾಮಣಿ: ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿಯು ನ. 23ರಿಂದ ಆನ್‌ಲೈನ್ ಮೂಲಕ 21 ದಿನಗಳ ಉಚಿತ ಯೋಗಾಸನ, ಪ್ರಾಣಾಯಾಮ, ಧ್ಯಾನ ತರಗತಿ ಹಮ್ಮಿಕೊಂಡಿದೆ.

ಯುವಕ ಮತ್ತು ಯುವತಿಯರ ವಿಭಾಗ, ಹಿರಿಯ ನಾಗರಿಕರ ವಿಭಾಗ, ವೃತ್ತಿಪರರ ವಿಭಾಗ ಹಾಗೂ ಮಕ್ಕಳ ವಿಭಾಗದ 7 ವಿಶೇಷ ಪ್ರಕಾರಗಳಲ್ಲಿ ತರಬೇತಿ ನೀಡಲಾಗುತ್ತದೆ. ಜ್ಯೂಮ್ ಆ್ಯಪ್ ಮೂಲಕ ತರಬೇತಿ ನಡೆಸಲಾಗುವುದು. ಆಸಕ್ತರು ಕ್ಯೂಆರ್ ಕೋಡ್ ಮೂಲಕ ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ನ. 22ರ ಒಳಗಾಗಿ ನೋಂದಣಿ ಮಾಡಿಕೊಳ್ಳಬೇಕು. ವಿವರಗಳನ್ನು ಗ್ರೂಪ್‌ನಲ್ಲಿ ನೀಡಲಾಗುವುದು.

ತರಗತಿಗಳ ಉದ್ಘಾಟನಾ ಕಾರ್ಯಕ್ರಮವು ಆನ್‌ಲೈನ್‌ನಲ್ಲಿಯೇ ನ. 23ರಂದು ಸಂಜೆ 6.30ರಿಂದ 8 ಗಂಟೆವರೆಗೆ ನಡೆಯಲಿದೆ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮಪಡಿಸುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿ ತಿಳಿಸಿದೆ.

ADVERTISEMENT

ಹೆಚ್ಚಿನ ಮಾಹಿತಿಗೆ ಮೊಬೈಲ್97311 14046, 99802 69482 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.