ADVERTISEMENT

ಇಂದಿನಿಂದ ‘ಕೊರೊನಾ ಲಸಿಕಾ ಉತ್ಸವ’

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 5:40 IST
Last Updated 11 ಏಪ್ರಿಲ್ 2021, 5:40 IST

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದಂತೆ ದೇಶದಾದ್ಯಂತ ಏ. 11ರಿಂದ 14ರವರೆಗೆ ‘ಕೊರೊನಾ ಲಸಿಕಾ ಉತ್ಸವ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯೂ ಲಸಿಕಾ ಉತ್ಸವಕ್ಕೆ ಸಿದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದ್ದಾರೆ.

ಏ. 11ರಂದು ಜ್ಯೋತಿ ಬಾ ಪುಲೆ ಅವರ ಜಯಂತಿ ಅಂಗವಾಗಿ ವಿಶೇಷವಾಗಿ ಮಹಿಳೆಯರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಹಾಕುವ ಉದ್ದೇಶ ಇದೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ‘ವಿಶೇಷ ಪಿಂಕ್ ಬೂತ್’ ತೆರೆಯಲಾಗಿದೆ. ಇಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರು, ಮಹಿಳಾ ಅಧಿಕಾರಿಗಳು, ಸಿಬ್ಬಂದಿ ಹಾಗೂ ಇತರರು ಲಸಿಕೆ ಹಾಕಿಸಿಕೊಳ್ಳಬಹುದು.

ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಏ. 14ರಂದು ಚಿಕ್ಕಬಳ್ಳಾಪುರದ 30ನೇ ವಾರ್ಡ್‍ನ ಅಂಬೇಡ್ಕರ್ ನಗರ ಸೇರಿದಂತೆ ಇತರ ಪ್ರದೇಶಗಳಲ್ಲಿ ಲಸಿಕೆ ಹಾಕುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.