ಶಿಡ್ಲಘಟ್ಟ: ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದ ಗಣೇಶ ಮೂರ್ತಿ ವಿಸರ್ಜನೆಯ ವೇಳೆ ನೃತ್ಯ ಮಾಡುತ್ತಲೇ ಗ್ರಾಮದ ಲಕ್ಷ್ಮಿಪತಿ ಅವರು (40) ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸ್ನೇಹಿತರ ಜೊತೆ ಆಪ್ತರಕ್ಷಕ ಸಿನಿಮಾದ ‘ಸುಂದರ ವದನ...’ ಹಾಡಿಗೆ ನೃತ್ಯ ಮಾಡುತ್ತಿದ್ದರು. ಈ ವೇಳೆ ಹೃದಯಾಘಾತವಾಗಿದೆ. ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.