ಗೌರಿಬಿದನೂರು: ತಾಲ್ಲೂಕಿನ ನಾಮಗೊಂಡ್ಲು ಗ್ರಾಮದಲ್ಲಿನ ಪಾಳುಬಿದ್ದ ಬಾವಿಗೆ ಬಿದ್ದಿದ್ದ ಜಿಂಕೆ ಮರಿಯನ್ನು ಶುಕ್ರವಾರ ಅರಣ್ಯ ಇಲಾಖೆ ರಕ್ಷಣೆ ಮಾಡಿದೆ.
ನಾಮಗೊಂಡ್ಲು ಗ್ರಾಮದಲ್ಲಿ ಆಹಾರ ಅರಸಿ ಬಂದ 2 ವರ್ಷದ ಜಿಂಕೆ ಮರಿ ಗುರುವಾರ ರಾತ್ರಿ ಬಾವಿಗೆ ಬಿದ್ದು ಹೊರಬರಲಾರದೆ ಒದ್ದಾಡುತ್ತಿತ್ತು. ಶುಕ್ರವಾರ ಬೆಳಗ್ಗೆ ಮರಿಯನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.
ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಡಿಆರ್‌ಎಫ್‌ಒ ಶಿವಕುಮಾರ್ ಮತ್ತು ಸಿಬ್ಬಂದಿ ಬಾವಿಗೆ ಇಳಿದು ಜಿಂಕೆ ಮರಿಯನ್ನು ಮೇಲಕ್ಕೆ ಎತ್ತಿ ರಕ್ಷಣೆ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ಹಂಸವಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.