
ಗೌರಿಬಿದನೂರು: ತಾಲ್ಲೂಕಿನ ಇಡಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಹೊಂದಿಕೊಂಡಿರುವ ಬಳಕೆರೆ ಗ್ರಾಮದ ನಿವಾಸಿ ಮಂಜುನಾಥ್ ಅವರ ಬಾಳೆ ತೋಟದಲ್ಲಿನ ಗಿಡಗಳನ್ನು ದುಷ್ಕರ್ಮಿಗಳು ರಾತ್ರೋರಾತ್ರಿ ಕತ್ತರಿಸಿ ಹಾಕಿದ್ದಾರೆ.
‘ಸೋಮವಾರ ಕುಟುಂಬಸ್ಥರು ನಂಜನಗೂಡು ದೇವಸ್ಥಾನಕ್ಕೆ ಹೋಗಿದ್ದೆವು. ಮೂರು ಎಕರೆ ಪ್ರದೇಶದಲ್ಲಿ ಮೂರುಸಾವಿರ ಗಿಡಗಳನ್ನು ನಾಟಿ ಮಾಡಲಾಗಿತ್ತು. ಅದರಲ್ಲಿ 1000ಕ್ಕೂ ಹೆಚ್ಚು ಬಾಳೆ ಗಿಡಗಳನ್ನು ಕತ್ತರಿಸಿ ಹಾಕಿದ್ದಾರೆ. ಇದರಿಂದ ₹5ಲಕ್ಷ ನಷ್ಟವಾಗಿದೆ. ಈ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ’ ಎಂದು ರೈತ ಮಂಜುನಾಥ್ ತಿಳಿಸಿದರು.
ನಂದಿನಿ ಮಾತನಾಡಿ, ‘ನಮ್ಮ ಹಸು ಬೇರೆಯವರ ಹೊಲದಲ್ಲಿ ಮೇಯಲು ಹೋಗಿತ್ತು. ಆಗ ಕೆಲವರು ನಮ್ಮ ಮೇಲೆ ಗಲಾಟೆ ಮಾಡಿದ್ದರು. ನಾವು ಊರಲ್ಲಿ ಇಲ್ಲದ ಸಮಯ ನೋಡಿಕೊಂಡು ಬಾಳೆಗಿಡಗಳನ್ನು ಅವರೇ ನಾಶ ಮಾಡಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ನಮಗೆ ಸಂಬಂಧಪಟ್ಟ ಇಲಾಖೆಯಿಂದ ಪರಿಹಾರ ಒದಗಿಸಬೇಕು’ ಎಂದು ಅಳಲು ತೋಡಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.