ಗೌರಿಬಿದನೂರು: ನಗರದ ಬೈಪಾಸ್ ಗಣೇಶ ವಿಸರ್ಜನೆ ವೀಕ್ಷಿಸಲು ಕಾರಿನಲ್ಲಿ ತೆರಳುತ್ತಿದ್ದ ಇಬ್ಬರು ವಡ್ಡರ ಬಂಡೆ ಕ್ರಾಸ್ ಬಳಿ ಭಾನುವಾರ ನಡೆದ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಗೆದರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎಫ್‌ಡಿಎ ಶಶಿ (42) ಮತ್ತು ಮಂಚೇನಹಳ್ಳಿ ತಾಲ್ಲೂಕಿನ ದಂಡಿಗಾನಹಳ್ಳಿಯ ಮೆಕ್ಯಾನಿಕ್ ಮುನಿರಾಜು (28) ಮೃತರು. ಕಾರಿನಲ್ಲಿದ್ದ ಮಂಚೇನಹಳ್ಳಿಯ ಮುಕ್ಕಡಿಪೇಟೆಯ ರಮೇಶ್ (40) ತೀವ್ರವಾಗಿ ಗಾಯಗೊಂಡಿದ್ದು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಚೇನಹಳ್ಳಿಯಿಂದ ಗೌರಿಬಿದನೂರಿನತ್ತ ಸಾಗುವಾಗ ವಡ್ಡರ ಬಂಡೆ ಬಳಿ ಕಾರು ನೀಲಗಿರಿ ಮರಕ್ಕೆ ಡಿಕ್ಕಿಯಾಗಿದೆ. ಮೃತ ಶಶಿ ಅವರ ಪತ್ನಿ ನಾಜಿಯಾ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.